ರಬಕವಿ ಬನಹಟ್ಟಿ: ರಬಕವಿ ಬನಹಟ್ಟಿ ಹಾಗೂ ಜಿಲ್ಲೆಯ ಇನ್ನೀತರ ತಾಲ್ಲೂಕಿನ ನೇಕಾರರು ವಿದ್ಯುತ್ ದರ ದ್ವಿಗುಣಗೊಂಡಿದ್ದನ್ನು ಖಂಡಿಸಲು, 20 ಎಚ್.ಪಿ ವರೆಗೆ ಉಚಿತ ವಿದ್ಯುತ್ ನೀಡಬೇಕು ಮತ್ತು ನೇಕಾರರ ವಿವಿಧ ಹಕ್ಕೊತ್ತಾಯಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿ ಜುಲೈ 11ರಂದು ಬೆಂಗಳೂರು ಚಲೊ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ತಿಳಿಸಿದರು.
ಇಲ್ಲಿನ ಕಾಡಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ನಡೆದ ನೇಕಾರರ ಸಭೆಯಲ್ಲಿ ಮಾತನಾಡಿ, ನೇಕಾರರ ಸಂಪೂರ್ಣ ಸಾಲ ಮನ್ನಾ, ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ಕಾರ್ಮಿಕ ಸೌಲಭ್ಯಗಳನ್ನು ಜಾರಿಗೊಳಿಸಿ, ನೇಕಾರರಿಗೆ ಕನಿಷ‍್ಠ ₹1,500 ಕೋಟಿ ಹಣವನ್ನು ಮೀಸಲಾಗಿಡಬೇಕು. ನೇಕಾರಿಕೆ ಮತ್ತು ನೇಕಾರರ ಅಭಿವೃದ್ಧಿಗಾಗಿ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ‍್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
ಈ ಎಲ್ಲ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ 12 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮುಖಂಡ ಆನಂದ ಜಗದಾಳ ಸೇರಿದಂತೆ ಅನೇಕರು ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.