ಬುಧವಾರ, ಮೇ 25, 2022
22 °C

ಸಕ್ಕರೆ ಕಾರ್ಖಾನೆ ಬಂದ್, ಸಾಲದ ಬಾಧೆ: ದಿನಗೂಲಿ ನೌಕರ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಸಕ್ಕರೆ ಕಾರ್ಖಾನೆ ಬಂದ್ ಆಗಿದ್ದರಿಂದ ನೊಂದ ದಿನಗೂಲಿ ನೌಕರ ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಧೋಳ ತಾಲ್ಲೂಕಿನ ಗುಲಗಾಲ ಜಂಬಗಿಯ ಹನಮಂತ (32) ಆತ್ಮಹತ್ಯೆ ಮಾಡಿಕೊಂಡವರು.

ಅವರು ಮುಧೋಳ ತಾಲ್ಲೂಕಿನ ತಿಮ್ಮಾಪುರದ  ರನ್ನ ಸಹಕಾರಿ ಸಕ್ಕರೆ ಕಾಖಾ೯ನೆಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದರು.

ಕಳೆದ ಎರಡು ವಷ೯ಗಳಿಂದ ಕಾಖಾ೯ನೆ ಬಂದ್ ಆಗಿದೆ.

ಹನಮಂತ ಬ್ಯಾಂಕ್ ಹಾಗೂ ಖಾಸಗಿಯಾಗಿ ₹2.88 ಲಕ್ಷ ಸಾಲ ಮಾಡಿದ್ದರು. ಈಗ ಸಾಲ ಮರಳಿಸಬೇಕಾದ ಒತ್ತಡ ಹಾಗೂ ಕಾರ್ಖಾನೆ ಪುನರ್ ಆರಂಭವಾಗದ ಕಾರಣ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ತಮ್ಮದೇ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಲೋಕಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು