ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘಟಪ್ರಭಾ ನದಿಗೆ ನೀರು ಢವಳೇಶ್ವರ ಸೇತುವೆ ಜಲಾವೃತ

Last Updated 18 ಜೂನ್ 2021, 17:19 IST
ಅಕ್ಷರ ಗಾತ್ರ

ಮಹಾಲಿಂಗಪುರ: ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸಮೀಪದ ಢವಳೇಶ್ವರ ಸೇತುವೆ ಗುರುವಾರ ಸಂಜೆ ಜಲಾವೃತಗೊಂಡಿದೆ.

ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಘಟಪ್ರಭಾ ನದಿ ಮೂಲಕ ಹಿಡಕಲ್ ಜಲಾಶಯಕ್ಕೆ ಅಪಾರ
ಪ್ರಮಾಣದಲ್ಲಿ ನೀರು ಹರಿದು ಬರಲಾರಂಭಿಸಿದೆ.

ಢವಳೇಶ್ವರ ಸೇತುವೆ ಸೇರಿದಂತೆ ನಂದಗಾವ-ಅವರಾದಿ, ಅಕ್ಕಿಮರಡಿ-ಮಿರ್ಜಿ ಸೇತುವೆಗಳು ಜಲಾವೃತಗೊಂಡಿವೆ. ಸೇತುವೆ ಸಂಪರ್ಕ ಹೊಂದಿದ ಹತ್ತಾರು ಗ್ರಾಮಗಳ ಗ್ರಾಮಸ್ಥರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ.

ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಅಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT