ಬಾಗಲಕೋಟೆ: ಜಿಲ್ಲೆಯಲ್ಲಿ ಸಮರ್ಪಕವಾಗಿ ಪೆಟ್ರೋಲ್ ಮತ್ತು ಡೀಸೆಲ್ ಸರಬರಾಜು ಆಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಸಂಗಪ್ಪ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ನಡೆದ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಗೆ ವಿವಿಧ ತೈಲ ಕಂಪನಿ ವಿತರಕರಿಂದ ಸಮಪರ್ಕವಾಗಿ ಪೆಟ್ರೋಲ್ ಮತ್ತು ಡಿಸೇಲ್ ಪೂರೈಕೆಯಾಗುತ್ತಿದೆ ಎಂದರು.

ಜಿಲ್ಲೆಯ ಕೆಲವು ಪೆಟ್ರೋಲ್ ಪಂಪ್ಗಳಿಗೆ ಮಾತ್ರ ವೈಯಕ್ತಿಕ ಕಾರಣಗಳಿಂದ ತೈಲ ಪೂರೈಯಾಗಿರುವುದಿಲ್ಲ. ಇದನ್ನು ಹೊರತುಪಡಿಸಿ ಉಳಿದ ಎಲ್ಲ ಪೆಟ್ರೋಲ್ ಪಂಪ್ಗಳಲ್ಲಿ ಅಗತ್ಯತೆಗೆ ಅನುಸಾರವಾಗಿ ತೈಲ ಲಭ್ಯವಿರುತ್ತದೆ ಎಂದು ಹೇಳಿದರು.

ನಾಗರಿಕರು ಪೆಟ್ರೋಲ್ ಸಿಗುವುದಿಲ್ಲ ಎಂಬ ಭೀತಿಯಿಂದ ಖರೀದಿ ಮಾಡಬಾರದು. ಪೆಟ್ರೋಲಿಯಂ ಕಾಯ್ದೆ ಪ್ರಕಾರ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಪೆಟ್ರೋಲ್ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದರೆ, ಕೃಷಿ ಬಳಕೆ ವಾಹನಗಳಿಗೆ ಉಪಯೋಗಕ್ಕಾಗಿ ಡೀಸೆಲ್ ಅನ್ನು ಮಾತ್ರ ಅನುಮೋದಿತ ಕ್ಯಾನ್ಗಳಲ್ಲಿ ತೆಗೆದುಕೊಂಡು ಹೋಗಬಹುದಾಗಿದೆ ಎಂದರು.

ಪೆಟ್ರೋಲ್ ಬಂಕ್ಗಳವರು ಯಾವುದೇ ರೀತಿಯ ಉಲ್ಲಂಘನೆ ಮಾಡಿದ್ದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಪೆಟ್ರೋಲ್ ಪಂಪ್ಗಳಲ್ಲಿ ಶಿಸ್ತು ಮತ್ತು ಸೌಹಾರ್ದ ನಡವಳಿಕೆ ಕಾಪಾಡಿಕೊಳ್ಳಬೇಕು. ಸಾರ್ವಜನಿಕರೂ ಸಹಕರಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಉಪಸ್ಥಿತರಿದ್ದರು.

Cut-off box - ಸಮಸ್ಯೆ ಎದುರಾದರೆ ಸಂಪರ್ಕಿಸಿ ಬಾಗಲಕೋಟೆ: ಪೆಟ್ರೋಲ್ ಡೀಸೆಲ್ನಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಐಒಸಿ ಕಂಪನಿಯ ಶ್ರೀನಿವಾಸ (94482 85589) ಬಿಪಿಸಿ ಕಂಪನಿಯ ಸ್ಪಂದನ (83089 55566) ಆರ್.ಬಿ.ಎಂಎಲ್ನ ಕೇದಾರ (91481 75566) ನಯರಾ ಕಂಪನಿಯ ಅವಿನ್ ಲೋಬೋ (63603 70760) ಎಂಆರ್ಪಿಸಿಎಲ್ನ ರವಿಚಂದ್ರ (81509 70425) ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (08354–235094).

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.