ಶನಿವಾರ, ಜೂನ್ 25, 2022
24 °C

ಸಿಎಂ ಬದಲಾವಣೆ ಕಾಂಗ್ರೆಸ್‌ನ ಹಗಲುಗನಸು: ಗೋವಿಂದ ಕಾರಜೋಳ ಲೇವಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ರಾಜ್ಯದಲ್ಲಿ ಇನ್ನೇನು ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರು, ರಾಜ್ಯದ 224 ಕ್ಷೇತ್ರಗಳಲ್ಲೂ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅಭ್ಯರ್ಥಿಗಳನ್ನು ಕೆಲಸಕ್ಕೆ ಹಚ್ಚಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಅಜೆಂಡಾ ಇಲ್ಲ. ಈ ವಿಚಾರ ಯಾರೂ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಸರ್ಕಾರದ ಮುಂದಿನ ಅವಧಿಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದರು.

ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಅಂತೆ–ಕಂತೆಗಳಿಗೆ ಫುಲ್‌ಸ್ಟಾಪ್ ಇಡಲು ಹೈಕಮಾಂಡ್ ಕೇಳಿದರೆ ರಾಜೀನಾಮೆ ಕೊಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ  ಕಾರಜೋಳ ಪ್ರತಿಕ್ರಿಯಿಸಿದರು. ಕಾಂಗ್ರೆಸ್‌ನವರಿಗೆ ಬಹಳ ಅವಸರವಾಗಿ ರಾಜ್ಯದಲ್ಲಿ ಚುನಾವಣೆ ಬರಬೇಕಿದೆ. ಆದರೆ ಅವಧಿ ಮುಗಿದ ಮೇಲೆಯೇ ಚುನಾವಣೆ ಬರಲಿದೆ. ಮಧ್ಯದಲ್ಲಿ ಬರುವುದಿಲ್ಲ. ಕಾಂಗ್ರೆಸ್‌ನ ಆಸೆಯೂ ಈಡೇರುವುದಿಲ್ಲ ಎಂದು ಕಟುಕಿದರು.

ಇದನ್ನೂ ಓದಿ... ಹಾನಗಲ್‌ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು