ಮಂಗಳವಾರ, ಆಗಸ್ಟ್ 11, 2020
26 °C

ಪಿಪಿಇ ಕಿಟ್ ಧರಿಸಿ ಶವ ಸಾಗಿಸಿದರು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಗುಳೇದಗುಡ್ಡ ತಾಲ್ಲೂಕಿನ ಬೂದಿನಗಡ ಗ್ರಾಮದಲ್ಲಿ ಕೊರೊನಾ ಸೋಂಕು ತಗುಲಿದ ಶಂಕಿತ 30 ವರ್ಷದ ಮಹಿಳೆ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಕುಟುಂಬದವರು ಸೇರಿ ಕೋವಿಡ್ ನಿಯಮಾವಳಿ ಅನ್ವಯ ಅಂತ್ಯಸಂಸ್ಕಾರ ನಡೆಸಿದರು.

ಅಧಿಕ ಮಧುಮೇಹದಿಂದ (ಹೈಶುಗರ್) ಬಳಲುತ್ತಿದ್ದ ಮಹಿಳೆ ಶನಿವಾರ ಮನೆಯಲ್ಲಿಯೇ ಮೃತಪಟ್ಟಿದ್ದರು. ಕೋವಿಡ್ ಶಂಕೆಯಿಂದ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇನ್ನೂ ವರದಿ ಬರಬೇಕಿದ್ದ ಕಾರಣ ಮುಂಜಾಗರೂಕತಾ ಕ್ರಮವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಪಿಪಿಇ ಕಿಟ್ ಧರಿಸಿ ಹೆಗಲ ಮೇಲೆ ಶವ ಹೊತ್ತುಕೊಂಡು ಶವ ಸಂಸ್ಕಾರ ಸ್ಥಳಕ್ಕೆ ಕೊಂಡೊಯ್ದರು.

ಮಾಸ್ಕ್ ಹಾಗೂ ಹ್ಯಾಂಡ್‌ಗ್ಲೌಸ್ ಧರಿಸಿದ್ದ ಮೃತ ಮಹಿಳೆಯ ಕುಟುಂಬದವರು ಹಿಂದೆಯೇ ಸಾಗಿದರು. ಶವ ಸಂಸ್ಕಾರದ ವೇಳೆ ದೂರದಲ್ಲಿಯೇ ನಿಂತು ಪ್ರಕ್ರಿಯೆಗಳ ವೀಕ್ಷಿಸಿದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು