ಭಾನುವಾರ, ಮೇ 22, 2022
24 °C
ರಂಭಾಪುರಿ, ಕೇದಾರ ಜಗದ್ಗುರುಗಳು ಭಾಗಿ: ಹಾವಗಿಲಿಂಗೇಶ್ವರ ಶಿವಾಚಾರ್ಯ

ಅದ್ದೂರಿ ಪಂಚಾಚಾರ್ಯ ಜಯಂತಿ ಯುಗಮಾನೋತ್ಸವಕ್ಕೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಅಖಿಲ ಭಾರತ ವೀರಶೈವ ಮಹಾಸಭಾ, ಶ್ರೀ ಜಗದ್ಗುರು ಪಂಚಾಚಾರ್ಯ ಜಯಂತಿ ಯುಗಮಾನೋತ್ಸವ ಸೇವಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಜಗದ್ಗುರು ಪಂಚಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಏಪ್ರಿಲ್ 23 ರಂದು ನಗರದಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

ನಗರದ ಲಾಡಗೇರಿ ಹಿರೇಮಠದಲ್ಲಿ ನಡೆದ ಯುಗಮಾನೋತ್ಸವ ಪೂರ್ವ ಭಾವಿ ಸಿದ್ಧತಾ ಸಭೆಯಲ್ಲಿ ಹಲಬರ್ಗಾ ಮಠದ ಹಾವಗಿಲಿಂಗೇಶ್ವರ ಶಿವಾಚಾರ್ಯ ಈ ವಿಷಯ ತಿಳಿಸಿದರು.

ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹಾಗೂ ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯರ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದೆ. ರಾಜ್ಯ ಹಾಗೂ ನೆರೆ ರಾಜ್ಯಗಳ ಅಪಾರ ಭಕ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, ಯುಗಮಾನೋತ್ಸವ ಕಾರ್ಯಕ್ರಮವನ್ನು ಸರ್ವ ರೀತಿಯಿಂದಲೂ ಯಶಸ್ವಿಗೊಳಿಸಲು ಸ್ವಾಗತ, ಸಲಹೆ, ಮೆರವಣಿಗೆ, ಪ್ರಸಾದ, ಪ್ರಚಾರ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ಏ. 23 ರಂದು ಬೆಳಿಗ್ಗೆ ಗಣೇಶ ಮೈದಾನದಿಂದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದ ವರೆಗೆ ಭವ್ಯ ಮೆರವಣಿಗೆ ನಡೆಯಲಿದೆ. ಬಳಿಕ ಧರ್ಮಸಭೆ ನಡೆಯಲಿದೆ ಎಂದು ಹೇಳಿದರು.

ಹೈದರಾಬಾದ್ ಕರ್ನಾಟಕ ಜಂಗಮ ಅಭಿವೃದ್ಧಿ ಸಂಸ್ಥೆಯ ಕಾರ್ಯಾಧ್ಯಕ್ಷ ಸಿದ್ರಾಮಯ್ಯ ಸ್ವಾಮಿ ಮಾತನಾಡಿ, ಅರ್ಥಪೂರ್ಣ ಯುಗಮಾನೋತ್ಸವ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿವೆ. ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು ಸಿದ್ಧತಾ ಕಾರ್ಯಗಳಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕುಶಾಲ್ ಯಾಬಾ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ಸಾಳೆ ಮಾತನಾಡಿ, ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ರಂಭಾಪುರಿ ಹಾಗೂ ಕೇದಾರ ಜಗದ್ಗುರುಗಳ ಆಶೀರ್ವಾದ ಪಡೆಯಬೇಕು ಎಂದು ಮನವಿ ಮಾಡಿದರು.

ಹಿರೇಮಠದ ಪೀಠಾಧಿಪತಿ ಗಂಗಾಧರ ಶಿವಾಚಾರ್ಯ ನೇತೃತ್ವ ವಹಿಸಿದ್ದರು. ಚಿಲ್ಲರ್ಗಿ ಮಠದ ಗುರುಪಾದಯ್ಯ ಚರಮೂರ್ತಿ, ಪ್ರಮುಖರಾದ ವರದಯ್ಯ ಸ್ವಾಮಿ, ಮಹೇಶ್ವರ ಸ್ವಾಮಿ, ಅಂಬರೀಷ್ ಬಟನಾಪುರೆ, ಶಿವಶರಣಪ್ಪ ಗಿರಿ, ಬಸವರಾಜ ಸ್ವಾಮಿ, ಪ್ರವೀಣ್ ಸ್ವಾಮಿ, ವಿರೂಪಾಕ್ಷ ನಾವದಗೇರಿ ಇದ್ದರು.

ಸಂಜೀವಕುಮಾರ ಸ್ವಾಮಿ ಸ್ವಾಗತಿಸಿದರು. ಶ್ರೀಕಾಂತ ಸ್ವಾಮಿ ನಿರೂಪಿಸಿದರು. ಮಹಾಲಿಂಗ ಸ್ವಾಮಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು