ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ‘ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ’ ಹೋರಾಟಕ್ಕೆ ಚಾಲನೆ

Last Updated 2 ಅಕ್ಟೋಬರ್ 2021, 3:36 IST
ಅಕ್ಷರ ಗಾತ್ರ

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆಯಿಂದ ಆಯೋಜಿಸಿರುವ ‘ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ’ ಹೋರಾಟ ಬೀಳಗಿ ತಾಲ್ಲೂಕಿನ ಅನಗವಾಡಿಯ ಘಟಪ್ರಭಾ ಸೇತುವೆಯಿಂದ ಶನಿವಾರ ಮುಂಜಾನೆ ಆರಂಭವಾಯಿತು.

ಪಾದಯಾತ್ರೆ ವಿಜಯಪುರ ಜಿಲ್ಲೆ ಕೊರ್ತಿ-ಕೊಲ್ಹಾರ ಬಳಿಯ ಕೃಷ್ಣಾ ನದಿ ಸೇತುವೆ ತಲುಪಲಿದೆ. 24 ಕಿ.ಮೀ ದೂರದ ಈ ಪಾದಯಾತ್ರೆ ನೇತೃತ್ವ ಗದಗ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ ವಹಿಸಿದ್ದು, ಇಳಕಲ್ ವಿಜಯ ಮಹಾಂತೇಶ ಮಠದ ಗುರು ಮಹಾಂತ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಿರೂರಿನ ಬಸವಲಿಂಗ ಸ್ವಾಮೀಜಿ ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಂಡಿದ್ದಾರೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಸುನಿಲ್ ಗೌಡ ಪಾಟೀಲ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಮಾಜಿ ಶಾಸಕರು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯ ಸಂತ್ರಸ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ.

ಅನಗವಾಡಿ ಸೇತುವೆಯ ಬಿ.ಎನ್.ಖೋತ್ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯ ಆವರಣದಲ್ಲಿ ಈ ಕಾಲ್ನಡಿಗೆ ಸಮಾರಂಭಕ್ಕೆ ಚಾಲನೆ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT