ಗುಳೇದಗುಡ್ಡ: ಬಾಗಲಕೋಟೆ ವಿಶ್ವವಿದ್ಯಾಲಯ ಆಡಳಿತ ಕಚೇರಿಯನ್ನು ಜಮಖಂಡಿಯಲ್ಲಿ ಸ್ಥಾಪಿಸಲಾಗಿದೆ. ಇದನ್ನು ಬಾಗಲಕೋಟೆಗೆ ಸ್ಥಳಾಂತರಿಸಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ರಾಜು ತಾಪಡಿಯಾ, ರಾಜ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಂಟಿ ಕಾರ್ಯದರ್ಶಿ ರಾಜು ಸಂಗಮ ಅವರು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಜಿಲ್ಲೆಯ ಐದು ತಾಲ್ಲೂಕುಗಳಾದ ಇಲಕಲ್ಲ, ಹುನಗುಂದ ಬಾದಾಮಿ, ಗುಳೇದಗುಡ್ಡ ಬಾಗಲಕೋಟೆ ಹಾಗೂ ಬೀಳಗಿಗೆ ಜಮಖಂಡಿ ದೂರವಾಗಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಅನುಕೂಲಕ್ಕೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ವಿಭಜನೆ ಮಾಡಿ ಬಾಗಲಕೋಟೆ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಆದರೆ ಅದರ ಕೇಂದ್ರ ಕಚೇರಿಯನ್ನು ಜಮಖಂಡಿ ಬದಲು ಬಾಗಲಕೋಟೆಯಲ್ಲಿ ಸ್ಥಾಪಿಸಬೇಕು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.