ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ | ಚುನಾವಣಾ ಕರ್ತವ್ಯ ಲೋಪ: ಅಮಾನತು

Published 19 ಮಾರ್ಚ್ 2024, 15:49 IST
Last Updated 19 ಮಾರ್ಚ್ 2024, 15:49 IST
ಅಕ್ಷರ ಗಾತ್ರ

ಬಾಗಲಕೋಟೆ: ಚುನಾವಣಾ ಕರ್ತವ್ಯದಲ್ಲಿ ನಿಷ್ಕಾಳಜಿ ತೋರಿದ ಬಾಗಲಕೋಟೆ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ನಾಗರಾಜ ಸಜ್ಜನ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎಂ. ಜಾನಕಿ ಆದೇಶ ಹೊರಡಿಸಿದ್ದಾರೆ.

ಚುನಾವಣಾಧಿಕಾರಿ ಆದೇಶ ಪಾಲನೆ ಮಾಡದೇ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾಗಿ ಕರ್ತವ್ಯ ಲೋಪ ಎಸಗಿರುವುದರಿಂದ ಇಲಾಖೆ ವಿಚಾರಣೆ ಬಾಕಿ ಇರಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಅಮಾನತುಗೊಳಿಸಿದ್ದಾರೆ. ಈ ಅವಧಿಯಲ್ಲಿ ಮೇಲಧಿಕಾರಿ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT