ಬಾಗಲಕೋಟೆ: ಧರ್ಮಸ್ಥಳದಲ್ಲಿ ಶವ ಹೂತಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ತನಿಖೆ ನಡೆದಿದೆ. ಧರ್ಮಸ್ಥಳ ಕ್ಷೇತ್ರಕ್ಕೆ ಯಾವುದೇ ಧಕ್ಕೆ ಬರದಂತೆ ಸರ್ಕಾರ ನಡೆದುಕೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ನಡೆದಿರುವ ಬೆಳವಣಿಗೆ ಹಿಂದೆ ಷಡ್ಯಂತ್ರ ಇರಬಹುದು ಎಂದರು.

ಒಳಮೀಸಲಾತಿ ವಿಚಾರವಾಗಿ ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿರುವ ಬಗ್ಗೆ ಮಾತನಾಡಿದ ಅವರು, ಯಾವುದೇ ಒಂದು ಆಯೋಗ ಬಂದಾಗ ಚರ್ಚೆಗಳು ನಡೆಯುವುದು ಸಾಮಾನ್ಯ. ವರದಿ ಅತ್ಯಂತ ಚೆನ್ನಾಗಿದೆ. ವರದಿಯಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಿದ್ದರೆ ಸರಿಪಡಿಸಲಾಗುವುದು. ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ನಲ್ಲಿ ಸತ್ಯ ಹೇಳಿದರೆ ಉಳಿಗಾಲ ಇಲ್ಲ ಎಂದು ಟೀಕಿಸುತ್ತಿರುವ ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದ ಅವರು, ಬಿಜೆಪಿಯಲ್ಲಿ ಸತ್ಯ ನುಡಿದರಿಗೆ ಏನು ಮಾಡಿದ್ದಾರೆ. ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಹಾಕಿದ್ದೇಕೆ? ಅವರು ಸುಳ್ಳು ಹೇಳಿದ್ದರಾ? ಪ್ರಶ್ನಿಸಲು ಅವರಿಗೆ ನೈತಿಕತೆ ಇಲ್ಲ ಎಂದು ಟೀಕಿಸಿದರು.

ಮದ್ಯದ ದರ ಬದಲಾವಣೆ ಇಲ್ಲ: ರಾಜ್ಯದಲ್ಲಿ ಮದ್ಯದ ದರ ಹೆಚ್ಚಿಸುವ ಅಥವಾ ಕಡಿಮೆ ಮಾಡುವ ಪ್ರಸ್ತಾವ ಇಲ್ಲ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಪ್ರಿಮಿಯಂ ಬ್ರ್ಯಾಂಡ್ಗಳ ಬೆಲೆ ಸ್ವಲ್ಪ ಹೆಚ್ಚು ಇದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.