ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡೆಂಗಿ ನಿಯಂತ್ರಣಕ್ಕೆ ಕ್ರಮ ವಹಿಸಿ: ಸಚಿವ

Published 28 ಜೂನ್ 2024, 15:52 IST
Last Updated 28 ಜೂನ್ 2024, 15:52 IST
ಅಕ್ಷರ ಗಾತ್ರ

ಬಾಗಲಕೋಟೆ: ‘ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ರೋಗ ತಡೆಗೆ ಸೂಕ್ತ ಕ್ರಮವಹಿಸಿ ರೋಗಿಗಳು ಮರಣ ಹೊಂದದಂತೆ ತಡೆಯಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡೆಂಗಿ ಹಾಗೂ ಚಿಕುನ್ ಗುನ್ಯಾ ನಿಯಂತ್ರಣ ಪೋಸ್ಟರ್ ಬಿಡುಗಡೆ ಹಾಗೂ ಲಾರ್ವಾ ನಿರ್ಮೂಲನಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡೆಂಗಿ ನಿಯಂತ್ರಣಕ್ಕೆ ಅಭಿಯಾನದ ರೂಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರತಿ ಶುಕ್ರವಾರ ಆಶಾ ಕಾರ್ಯಕರ್ತರು ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು ಸೇರಿ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು ಎಂದರು.

ರೋಗ ಲಕ್ಷಣ ತಿಳಿಸಬೇಕು. ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವ ಲಾರ್ವಾ ನಾಶ ಪಡಿಸುವ ಬಗ್ಗೆ ಮಾಹಿತಿ ನೀಡುವ ಕೆಲಸವಾಗಬೇಕು. ಶೇಖರಣೆಗೊಂಡ ನೀರು ಉಪಯೋಗವಾಗುತ್ತಿರಬೇಕು. ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಾರ್ವಜನಿಕರಿಗೆ ಲಾರ್ವಾ ಮೊಟ್ಟೆಗಳನ್ನು ತಿನ್ನುವ ಮೀನುಗಳನ್ನು ವಿತರಿಸಲಾಯಿತು. ಶಾಸಕರಾದ ಎಚ್.ವೈ. ಮೇಟಿ, ಭೀಮಸೇನ ಚಿಮ್ಮನಕಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತ ರಂದೀಪ, ಎಂ.ಡಿ.ಎನ್.ಎಚ್.ಎಂ ನವೀನ ಭಟ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT