ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

144 ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪತ್ರ ವಿತರಣೆ

Published : 8 ಆಗಸ್ಟ್ 2024, 13:15 IST
Last Updated : 8 ಆಗಸ್ಟ್ 2024, 13:15 IST
ಫಾಲೋ ಮಾಡಿ
Comments

ಬಾದಾಮಿ:  ‘ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಮಹಿಳೆಯರಿಗೆ, ಶಾಲಾ ವಿದ್ಯಾರ್ಥಿಗಳಿಗೆ, ಮಂದಿರ ಮತ್ತು ಕೆರೆಗಳ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ನೆರವು ನೀಡುವ ಕಾರ್ಯ ಶ್ಲಾಘನೀಯವಾಗಿದೆ ’ ಎಂದು ಕಾಳಿದಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಹೇಳಿದರು.

ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಆಶ್ರಯದಲ್ಲಿ ನಡೆದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕಿನ 144 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹25.46 ಲಕ್ಷ ಮೌಲ್ಯದ ಶಿಷ್ಯವೇತನ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ಡಾ.ಎಂ.ಜಿ. ಕಿತ್ತಲಿ, ಮಹೇಶ ಹೊಸಗೌಡ್ರ, ಶಿವಕುಮಾರ ಹಿರೇಮಠ, ಧರ್ಮಸ್ಥಳ ಯೋಜನೆ ಬಾಗಲಕೋಟೆ ಜಿಲ್ಲಾ ನಿರ್ದೇಶಕ ಚನ್ನಕೇಶವ, ತಾಲ್ಲೂಕಾ ಯೋಜನಾಧಿಕಾರಿ ಮಹಾಂತೇಶ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT