ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Published 3 ಜುಲೈ 2024, 14:55 IST
Last Updated 3 ಜುಲೈ 2024, 14:55 IST
ಅಕ್ಷರ ಗಾತ್ರ

ಆಲಮಟ್ಟಿ: ಇಲ್ಲಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿಯೊಬ್ಬರು ₹ 60 ಸಾವಿರ ಮೌಲ್ಯದ ಎಚ್‌ಪಿ ಲ್ಯಾಪ್‌ಟಾಪ್ ನೀಡಿದರು.

ಹುಬ್ಬಳ್ಳಿ ತಾಲ್ಲೂಕಿನಲ್ಲಿ ಪಿಡಿಒ ಆಗಿರುವ ಗಿರೀಶ ಅಮರಗೊಂಡ ಇಲ್ಲಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಲ್ಯಾಪ್‌ಟಾಪ್ ನೀಡಿದರು.

ಈಚೆಗೆ ಆಲಮಟ್ಟಿಯಲ್ಲಿ ನಡೆದ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಲ್ಯಾಪ್‌ಟಾಪ್‌ನ್ನು ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ಯರವಿನತೆಲಿಮಠ ಅವರಿಗೆ ಹಸ್ತಾಂತರಿಸಿದರು.

ಸರ್ಕಾರಿ ಶಾಲೆಯಲ್ಲಿಯೂ ಸ್ಮಾರ್ಟ್ ಕ್ಲಾಸ್ ಅಳವಡಿಸಬೇಕಿದೆ. ಆ ನಿಟ್ಟಿನಲ್ಲಿ ಲ್ಯಾಪ್‌ಟಾಪ್ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಬಡ ಮಕ್ಕಳ ಶೈಕ್ಷಣಿಕ ಏಳಿಗೆಗೆ ಕೈಜೋಡಿಸುವೆ ಎಂದು ಗಿರೀಶ ಅಮರಗೊಂಡ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT