ಬಾಗಲಕೋಟೆ: ಮನುಷ್ಯನ ಆರೋಗ್ಯದಲ್ಲಿ ದಂತ ಆರೋಗ್ಯವೂ ಮಹತ್ವದ್ದಾಗಿದೆ. ಈ ದಿಸೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮಹೇಶ ಕೋಣಿ ಹೇಳಿದರು.

ಬಿ.ವಿ.ವಿ ಸಂಘದ ಪಿ.ಎಂ.ಎನ್.ಎಂ ದಂತ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಿದ್ದ ‘ಬಾಯಿ ಮತ್ತು ಮುಖದ ಶಸ್ತ್ರಚಿಕಿತ್ಸಕರ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಯಿ ಆರೋಗ್ಯದ ಅಗತ್ಯ ಅರಿತು ಕೇಂದ್ರ ಸರ್ಕಾರ ರಾಷ್ಟ್ರೀಯ ಬಾಯಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಆರಂಭಿಸಿದೆ. ಆಶಾ ಕಾರ್ಯಕರ್ತೆಯರ ಮೂಲಕ ದಂತ ಆರೋಗ್ಯದ ಅರಿವು ಸಾರ್ವಜನಿಕರಿಗೆ ತಲುಪಲಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ರವಿರಾಜ ದೇಸಾಯಿ ಮಾತನಾಡಿ, ದಂತ ಚಿಕಿತ್ಸೆಗಾಗಿ ಸರ್ಕಾರ ‘ದಂತ ಭಾಗ್ಯ’ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಪಿ.ಎಂ.ಎನ್.ಎಂ ದಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಸೌಲಭ್ಯವಿದೆ ಎಂದರು.

ಬಾಯಿ ಮತ್ತು ಮುಖದ ಶಸ್ತ್ರಚಿಕಿತ್ಸಕರ ದಿನದ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಡಾ.ಜಯಂತಕುಮಾರ, ಡಾ.ವಾಣಿ ಹುಣಸಿಕಟ್ಟಿ, ಡಾ.ಸತ್ಯಜೀತ ದಂಡಗಿ, ಡಾ.ಭೀಮಪ್ಪ, ಡಾ.ಆಶಾ ಬಡದೇಸಾಯಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.