ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಅಂಕಪಟ್ಟಿ ಪ್ರಕರಣ: ಶಿಕ್ಷಣ ಇಲಾಖೆ ಅನುಮತಿ ಪಡೆದಿಲ್ಲ- ಶಿಕ್ಷಣಾಧಿಕಾರಿ

Published 22 ಮೇ 2024, 15:44 IST
Last Updated 22 ಮೇ 2024, 15:44 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಸೋಷಿಯಲ್‌ ಡೆವಲಪ್‌ಮೆಂಟ್‌ ಆ್ಯಂಡ್ ಎಜುಕೇಷನ್‌ ಸೊಸೈಟಿ ಶಿಕ್ಷಣ ಸಂಸ್ಥೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿಲ್ಲ’ ಎಂದು ಕೊಪ್ಪಳ ನಗರ ಪೊಲೀಸ್ ಠಾಣೆಗೆ ಜಿಲ್ಲೆಯ ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಉತ್ತರಿಸಿದ್ದಾರೆ.

ನ್ಯಾಯಾಲಯದಲ್ಲಿ ಜವಾನ ಹುದ್ದೆಗೆ ಆಯ್ಕೆಯಾಗಿರುವ ಪ್ರಭು ಲೋಕರೆ ಪಡೆದಿರುವ ಅಂಕಗಳ ಬಗ್ಗೆ ಅನುಮಾನಗೊಂಡು ಕೊಪ್ಪಳದ ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ ಸತ್ಯಾಸತ್ಯತೆ ತಿಳಿಯಲು ಅಲ್ಲಿನ ಠಾಣೆಯ ಪೊಲೀಸರು ಕೇಳಿದ್ದ ಮಾಹಿತಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಉತ್ತರ ಕಳುಹಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ನಿರ್ಣಯ ಮಂಡಳಿಯಲ್ಲಿ ಶಾಲೆ ನೋಂದಣಿಯಾಗಿಲ್ಲ. ಪ್ರಭುವಿನ ಅಂಕಪಟ್ಟಿ ವಿವರಗಳೂ ಕಚೇರಿಯಲ್ಲಿ ಲಭ್ಯವಿಲ್ಲ. ಆದ್ದರಿಂದ ಸಂಸ್ಥೆಯವರನ್ನೇ ತನಿಖೆಗೆ ಒಳಪಡಿಸಬಹುದು ಎಂದು ತಿಳಿಸಲಾಗಿದೆ.

ದೆಹಲಿ ಸಂಸ್ಥೆ ಹೆಸರಿನಲ್ಲಿ ಅಂಕಪಟ್ಟಿ ಜಾಲ: ‘ದೆಹಲಿಯ ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಷನ್‌ ಸಿಲೆಬಸ್‌ ಸೆಕೆಂಡರಿ ಸಂಸ್ಥೆಯ ಹೆಸರಿನಲ್ಲಿ ಅಂಕಪಟ್ಟಿ ಹಲವಾರು ವರ್ಷಗಳಿಂದ ನೀಡಲಾಗುತ್ತದೆ’ ಎಂದು ಅಭ್ಯರ್ಥಿಯೊಬ್ಬರು ತಿಳಿಸಿದರು.

‘ಈ ಕುರಿತು ಬೆಂಗಳೂರಿನ ಬನಶಂಕರಿ, ತೇರದಾಳ ಸೇರಿ ಹಲವು ಠಾಣೆಗಳಲ್ಲಿ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದೆ. ಮೇಲಿನ ಸಂಸ್ಥೆಯ ಬೋರ್ಡ್ ಎಲ್ಲಿಯೂ ಹಾಕಿಲ್ಲ. ಬೇರೆ ಹೆಸರಿನಲ್ಲಿ ಸಂಸ್ಥೆ ನಡೆಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಮಾತ್ರವಲ್ಲ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಹಲವು ಕೋರ್ಸ್ ಗಳಿಗೆ ಪ್ರವೇಶ ಪಡೆಯಲಾಗುತ್ತದೆ’ ಎಂದು ದೂರಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT