ಬೀಳಗಿ: ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಸದಸ್ಯರುಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ವಿಧಾನ ಪರಿಷತ್ನಲ್ಲಿ ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವೆ. ಪರಿಷತ್ನಲ್ಲಿ ಅವರ ಧ್ವನಿಯಾಗಿ ಕಾರ್ಯನಿರ್ವಹಿಸುವೆ ಎಂದು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.

ಸಮೀಪದ ಕೊರ್ತಿ ಸಮುದಾಯ ಭವನದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಮುಂಚೆ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳ ಗೌರವಧನ ಕೇವಲ ₹500 ಇತ್ತು. ಪರಿಷತ್ನಲ್ಲಿ ನಾನು ಹೋರಾಟ ಮಾಡಿದ ಫಲವಾಗಿ ಪ್ರಸ್ತುತವಾಗಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ₹6,000 ಉಪಾಧ್ಯಕ್ಷರು ₹4000 ಹಾಗೂ ಸದಸ್ಯರುಗಳು ₹2000 ಗೌರವಧನ ಪಡೆಯುತ್ತಿದ್ದಾರೆ ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದರು.

ಪ್ರತಿ ಗ್ರಾಮ ಪಂಚಾಯಿತಿಗೆ 100 ಮನೆಗಳನ್ನು ಒದಗಿಸಲು ವಸತಿ ಸಚಿವ ಜಮೀರ್ ಅಹ್ಮದ ಅವರಿಗೆ ವಿನಂತಿಸಿದ್ದೆ. ಇಲ್ಲಿಯವರೆಗೆ ಒಂದೂ ಮನೆ ಕೊಟ್ಟಿಲ್ಲ. ಮುಂಬರುವ ಅಧಿವೇಶನದಲ್ಲಿ ಮತ್ತೆ ಈ ವಿಷಯವನ್ನು ಎತ್ತುವೆ. ಬಡವರಿಗೆ ಸೂರು ಒದಗಿಸಲು ಪ್ರಯತ್ನಿಸುವೆ ಎಂದರು.

ಸ್ಥಳೀಯ ಸಂಸ್ಥೆಗಳ ಸದಸ್ಯರುಗಳು ಲಿಖಿತವಾಗಿ ಮನವಿ ನೀಡಿದರೆ ನನ್ನ ವ್ಯಾಪ್ತಿಗೆ ಬರುವ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವೆ ಎಂದು ತಿಳಿಸಿದರು.

ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರು ಭಾಗವಹಿಸಿ ವಿವಿಧ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ, ಟಿಎಪಿಸಿಎಂಎಸ್ ಅಧ್ಯಕ್ಷ ಮಲ್ಲಪ್ಪ ಕಾಳಗಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಮುತ್ತು ಬೊರ್ಜಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ, ನಾಗರಾಜ ಹದ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.