ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾಲಿಂಗಪುರ: ಚುನಾವಣೆ ಬಹಿಷ್ಕಾರ ಎಚ್ಚರಿಕೆ

Published 1 ಏಪ್ರಿಲ್ 2024, 15:14 IST
Last Updated 1 ಏಪ್ರಿಲ್ 2024, 15:14 IST
ಅಕ್ಷರ ಗಾತ್ರ

ಮಹಾಲಿಂಗಪುರ (ಬಾಗಲಕೋಟೆ ಜಿಲ್ಲೆ): ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದಿದ್ದಲ್ಲಿ ಪಟ್ಟಣ ಹಾಗೂ ಸುತ್ತಮುತ್ತಲಿನ 14 ಗ್ರಾಮಗಳು ಸೇರಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಾಲ್ಲೂಕು ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.

ಚನ್ನಮ್ಮ ವೃತ್ತದ ಬಳಿ ನಡೆದಿರುವ ಹೋರಾಟ ವೇದಿಕೆಯಲ್ಲಿ ಸೋಮವಾರ ಮಾತನಾಡಿದ ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ, ‘ಎಲ್ಲ ಅರ್ಹತೆಯನ್ನು ಹೊಂದಿರುವ ಮಹಾಲಿಂಗಪುರ ತಾಲ್ಲೂಕು ರಚನೆಗಾಗಿ ಕಳೆದ 719 ದಿನಗಳಿಂದ ಹೋರಾಟ ನಡೆಸಿದ್ದರೂ, ಯಾವುದೇ ಸರ್ಕಾರಗಳು ಸ್ಪಂದಿಸಿಲ್ಲ. ಬರೀ ಭರವಸೆಯಲ್ಲೇ ಕಾಲಹರಣ ಮಾಡುತ್ತಿವೆ. ತಾಲ್ಲೂಕು ಹೋರಾಟ ರಚನೆ ಮರೀಚಿಕೆಯಾಗಿದೆ. ಹೀಗಾಗಿ, ಚುನಾವಣೆ ಬಹಿಷ್ಕರಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT