ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ: ಜೆ.ಟಿ.ಪಾಟೀಲ

Published 18 ಜೂನ್ 2024, 14:15 IST
Last Updated 18 ಜೂನ್ 2024, 14:15 IST
ಅಕ್ಷರ ಗಾತ್ರ

ಕಲಾದಗಿ: ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.

ಸಮೀಪದ ಹಿರೇಶೆಲ್ಲಿಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ 8ನೇ ತರಗತಿ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಾಲಕರು ತಮ್ಮ ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳುಹಿಸಬೇಕು. ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಸರಿಯಾಗಿ ಒಳ್ಳೆಯ ಗುಣಮಟ್ಟದ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳ ಬದುಕು ಉಜ್ವಲವಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

8ನೇ ತರಗತಿಯ ಕೊಠಡಿಯಲ್ಲಿ ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ತರಗತಿ ಆರಂಭಿಸುವುದಕ್ಕೆ ಚಾಲನೆ ನೀಡಲಾಯಿತು. ಬಳಿಕ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ನಾಯ್ಕರ್, ಶಾಲಾ ಮೇಲು ಉಸ್ತುವಾರಿ ಅಧ್ಯಕ್ಷ ಮಹಾಂತೇಶ ಮಕಾನಿ, ಕೆಪಿಸಿಸಿ ಉಪಾಧ್ಯಕ್ಷ ಎಂ.ಬಿ.ಸೌದಾಗರ,ತಾಲ್ಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಸಂಗಣ್ಣ ಮುಧೋಳ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪಾಂಡು ಪೊಲೀಸ್, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಅರಿಹಂತ ರಾಮತೀರ್ಥ, ಕ್ಷೇತ್ರ ಸಮನ್ವಯ ಅಧಿಕಾರಿ ಎಚ್. ಕೆ.ಗುಡೂರ, ಬಿ ಆರ್ ಪಿ ಆರ್. ಆರ್. ದೇಸಾಯಿ, ಶಾಲಾ ಮುಖ್ಯ ಶಿಕ್ಷಕ ಡಿ.ಎಚ್.ಗುಡಿಮನಿ, ಫಕೀರಪ್ಪ ಮಾದರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT