ಬೀಳಗಿ: ‘ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ಮಾಲಿನ್ಯ ಮುಕ್ತ ಪರಿಸರ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕು’ ಎಂದು ಶಾಲಾ ಇಕೋ ಕ್ಲಬ್ ಮಾರ್ಗದರ್ಶಕ ಚಂದ್ರು ವೈ.ಎ. ಹೇಳಿದರು.

ತಾಲ್ಲೂಕಿನ ಕೊಪ್ಪ ಎಸ್.ಕೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಪರಿಸರದ ಉಳಿವು ನಮ್ಮೆಲ್ಲರ ಉಳಿವು. ಪರಿಸರ ನಾಶವೇ ನಮ್ಮ ವಿನಾಶ. ಅದಕ್ಕಾಗಿ ಪರಿಸರವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ’ ಎಂದರು.

ಪ್ರಭಾರ ಮುಖ್ಯ ಶಿಕ್ಷಕ ಉಮೇಶ ತಳ್ಳಿಕೇರಿ ಮಾತನಾಡಿದರು. ಶಿಕ್ಷಕಿ ಸಕ್ಕೂಬಾಯಿ ಬೆಳ್ಳುಬ್ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ರಾಜೇಂದ್ರ ಕುಂಬಾರ, ಸದಸ್ಯರಾದ ಅಶೋಕ ಜೋಗಿ, ಲಿಂಗರಾಜ ಬೂದಿಹಾಳ, ಸವಿತಾ ಮಾಳೆದ, ಸುವರ್ಣ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.