ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ವಿಸ್ತರಣೆ ವಿಚಾರಕ್ಕೆ ಮುಸುಕಿನ ಗುದ್ದಾಟ ಕೇವಲ ಮಾಧ್ಯಮಗಳ ಸೃಷ್ಟಿ: ಕಾರಜೋಳ

Last Updated 25 ಜನವರಿ 2020, 6:12 IST
ಅಕ್ಷರ ಗಾತ್ರ

ಬಾಗಲಕೋಟೆ:‘ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ನಡುವೆ ಯಾವುದೇ ಮುಸುಕಿನ ಗುದ್ದಾಟವಿಲ್ಲ. ಎಲ್ಲವೂ ಮಾಧ್ಯಮಗಳ ಸೃಷ್ಟಿ’ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಮುಧೋಳದಲ್ಲಿ ಶನಿವಾರ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಉಪಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಇಲ್ಲ ಎಂಬ ವಿಚಾರದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ವಿದೇಶ ಪ್ರವಾಸ ಮುಗಿಸಿ ಬಂದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿಲ್ಲ. ಸೋಮವಾರ ಅವರ ಭೇಟಿಯ ನಂತರ ಆ ಬಗ್ಗೆ ಪ್ರತಿಕ್ರಿಯಿಸುವೆ’ ಎಂದರು.

‘ಯಾರಿಗೆ ಸಚಿವ ಸ್ಥಾನ ಕೊಡಬೇಕು, ಬಿಡಬೇಕು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದರು. ಇನ್ನಷ್ಟು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

10 ಕಿ.ಮೀ ಬೈಪಾಸ್ ನಿರ್ಮಾಣ: ರಾಜ್ಯದ ಕೈಗಾರಿಕಾ ನಗರಿ ಎನಿಸಿದ ಮುಧೋಳದಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚುತ್ತಿದೆ. ಅದನ್ನು ತಪ್ಪಿಸಲು ₹70 ಕೋಟಿ ವೆಚ್ಚದಲ್ಲಿ 10 ಕಿ.ಮೀ ದೂರ ಬೈಪಾಸ್ ರಸ್ತೆ ನಿರ್ಮಿಸಲಾಗುತ್ತಿದೆ. ಇದರಲ್ಲಿ ಭೂಸ್ವಾಧೀನ ವೆಚ್ಚವೂ ಸೇರಿದೆ. ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳ ಕಾಲಾವಧಿ ನಿಗದಿಪಡಿಸಲಾಗಿದೆ. 6 ತಿಂಗಳಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದರು.

ಪ್ರವಾಹದಿಂದ ಲೋಕೋಪಯೋಗಿ ಇಲಾಖೆಗೆ ₹3000 ಕೋಟಿ ನಷ್ಟವಾಗಿದೆ. ರಸ್ತೆ, ಸೇತುವೆಗಳ ನಿರ್ಮಾಣಕ್ಕೆ ಮೊದಲ ಕಂತಿನಲ್ಲಿ ಇಲಾಖೆಯಿಂದಲೇ ₹ 500 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಕೇಂದ್ರದಿಂದ ಬಿಡುಗಡೆ ಮಾಡಲಾದ ಪರಿಹಾರ ಮೊತ್ತದಲ್ಲಿ ಇಲಾಖೆಗೆ ಯಾವುದೇ ವಿಶೇಷ ಪ್ಯಾಕೇಜ್ ನೀಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT