ಗುರುವಾರ , ಜೂಲೈ 2, 2020
28 °C

ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ವಿರುದ್ಧ ಅಶ್ಲೀಲ ಪೋಸ್ಟ್: ಯುವಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾದಾಮಿ: ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆದ ಶಾಸಕ ಸಿದ್ದರಾಮಯ್ಯ ಬಗ್ಗೆ ಫೇಸ್‌ಬುಕ್‌ನಲ್ಲಿ ಅಸಭ್ಯವಾಗಿ ಸಂದೇಶ ಹಾಕಿದ ಯುವಕನನ್ನು ಬಾದಾಮಿ ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಖ್ಯಾಡ ಗ್ರಾಮದ ಸಂಗಪ್ಪ ಸಿದ್ರಾಮಣ್ಣವರ ಬಂಧಿತ ಯುವಕ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಮಹಿಳೆಯೊಬ್ಬರು ವೇದಿಕೆಯಲ್ಲಿ ಕೆನ್ನೆಗೆ ಮುತ್ತಿಟ್ಟ ಚಿತ್ರವನ್ನು ಬಳಸಿಕೊಂಡು ಅಸಭ್ಯ ಸಂದೇಶ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಬಂಧಿಸಲಾಗಿದೆ ಎಂದು ಪಿಎಸ್‌ಐ ಪ್ರಕಾಶ ಬಣಕಾರ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು