ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆಯಲ್ಲಿ ಕೈಗಾರಿಕೆ ಸ್ಥಾಪನೆ: ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ

Published 29 ಏಪ್ರಿಲ್ 2024, 16:22 IST
Last Updated 29 ಏಪ್ರಿಲ್ 2024, 16:22 IST
ಅಕ್ಷರ ಗಾತ್ರ

ಬೀಳಗಿ: ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರಿಗೆ 20 ವರ್ಷ ಅವಕಾಶ ಕೊಟ್ಟಿದ್ಧಿರಿ, ಹಾಗೆಯೇ ನನಗೂ ಒಂದು ಬಾರಿ ಅವಕಾಶ ಕೊಡಿ. ಮತಕ್ಷೇತ್ರದ ಅಭಿವೃದ್ಧಿಯ ಜೊತೆಗೆ, ಬಾಗಲಕೋಟೆ ನಗರದಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸುವ ಮೂಲಕ ಕೈಗಾರಿಕಾ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.

ತಾಲ್ಲೂಕಿನ ಅರಕೇರಿ ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಲೋಕಸಭಾ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಮತಯಾಚಿಸಿ ಮಾತನಾಡಿ, ಯುಕೆಪಿ, ಪ್ರವಾಸೋಧ್ಯಮ, ರೈಲ್ವೆ, ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ದುಡಿಯುವ ಕೈಗಳಿಗೆ ಕೆಲಸ ಒದಗಿಸುವ ಮೂಲಕ ಮತಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಪಡಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುತ್ತೇವೆ. ನರೇಗಾ ಯೋಜನೆ ಸಂಬಳ ಹೆಚ್ಚಿಸುತ್ತೇವೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಲಾಭ ಪಡೆದುಕೊಳ್ಳುತ್ತಿದ್ದು, ಕೇಂದ್ರದಲ್ಲಿಯೂ ಕೂಡಾ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುತ್ತದೆ ಎಂದರು.

ಶಾಸಕ ಜೆ.ಟಿ.ಪಾಟೀಲ, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಹನಮಂತ ಕಾಖಂಡಕಿ, ವೀಕ್ಷಕ ಡಾ.ಸಯ್ಯದ್ ಬೂರಾ, ಬಸವಪ್ರಭು ಸರನಾಡಗೌಡ, ಜಿ.ಪಂ. ಮಾಜಿ ಅಧ್ಯಕ್ಷ ಎಂ.ಎಲ್.ಕೆಂಪಲಿಂಗನ್ನವರ, ಕಸ್ತೂರಿ ಲಿಂಗಣ್ಣವರ, ಮುತ್ತು ದೇಸಾಯಿ, ಲಲಿತಾ ಗೊಣ್ಣಾಗರ, ಹನಮಂತ ಆಗೋಜಿ, ಮುದಕಪ್ಪ ಮಲ್ಲಾರ, ಬಸವರಾಜ ಸಾವಕಾರ, ಅಜಿತ್ ಪಾಟೀಲ, ನಾನಪ್ಪ ಪೂಜಾರಿ, ಮುತ್ತಪ್ಪ ಲಮಾಣಿ, ಕಲ್ಲಪ್ಪ ಆಲಗುಂಡಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT