ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈರುಳ್ಳಿ ಬೆಳೆ ನಷ್ಟ; ರೈತ ಆತ್ಮಹತ್ಯೆ

ಪಿಕೆಪಿಎಸ್ ಸೇರಿದಂತೆ ಬೇರೆ ಬೇರೆ ಬ್ಯಾಂಕ್‌ಗಳಲ್ಲಿ ₹12 ಲಕ್ಷ ಸಾಲ ಪಡೆದಿದ್ದ ವೀರಯ್ಯ
Last Updated 9 ಮೇ 2020, 12:38 IST
ಅಕ್ಷರ ಗಾತ್ರ

ಬಾಗಲಕೋಟೆ: ಸಾಲಬಾಧೆಯಿಂದ ಬಾದಾಮಿ ತಾಲ್ಲೂಕಿನ ನಂದಿಕೇಶ್ವರದಲ್ಲಿ ಶುಕ್ರವಾರ ರಾತ್ರಿ ನೇಣು ಬಿಗಿದುಕೊಂಡು ರೈತ ವೀರಯ್ಯ ಬಸಯ್ಯ ಹಂಗರಗಿ (53) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ವೀರಯ್ಯ, ಮೂರು ಎಕರೆ ಜಮೀನು ಹೊಂದಿದ್ದರು. ಅದರಲ್ಲಿ ಈರುಳ್ಳಿ ಬೆಳೆದಿದ್ದರು. ಆದರೆ ಲಾಕ್‌ಡೌನ್‌ನಿಂದಾಗಿ ಬೆಳೆಗೆ ಸೂಕ್ತ ಬೆಲೆ ಸಿಗದೇ ನಷ್ಟ ಅನುಭವಿಸಿದ್ದರು. ಇದರಿಂದ ಮನನೊಂದಿದ್ದರು ಎನ್ನಲಾಗಿದೆ.

ವೀರಯ್ಯ ಅವರು ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ₹4 ಲಕ್ಷ, ಬೇರೆ ಬೇರೆ ಖಾಸಗಿ ಬ್ಯಾಂಕ್‌ಗಳಲ್ಲಿ ₹8 ಸೇರಿದಂತೆ ಒಟ್ಟು 12 ಲಕ್ಷ ಸಾಲ ಮಾಡಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಈ ಬಗ್ಗೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT