ಬಾದಾಮಿ: ‘ನಸಬಿ ಗ್ರಾಮದ ಸಮೀಪ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಕಾಮಗಾರಿ ಅವೈಜ್ಞಾನಿವಾಗಿ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಸರಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು’ ಎಂದು ರೈತರು ಹುಬ್ಬಳ್ಳಿ ವಿಭಾಗದ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ತಾಲ್ಲೂಕಿನ ನಸಬಿ ಗ್ರಾಮದ ಸಮೀಪ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಬಾಣಾಪುರ-ಗದ್ದನಕೇರಿ 367 ರಾಷ್ಟ್ರೀಯ ಹೆದ್ದಾರಿ ಕುರಿತು ರೈತರು ಸೋಮವಾರ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ರೈತರು ಬೆಳೆ ಸಾಗಿಸಲು ಸರ್ವಿಸ್ ರಸ್ತೆ ನಿರ್ಮಿಸಬೇಕು. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸುವ ಸೇತುವೆಯನ್ನು ನದಿಯಿಂದ ಶಿವಯೋಗಮಂದಿರ ರಸ್ತೆ ವರೆಗೆ ಕಾಲಂ ಸೇತುವೆ ರೂಪಿಸಲು ರೈತರು ಆಗ್ರಹಿಸಿದರು.

‘ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಕಾಮಗಾರಿ ಪರಿಶೀಲನೆ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮತ್ತು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ಹುಬ್ಬಳ್ಳಿ ವಿಭಾಗದ ರಾಷ್ಟ್ರೀಯ ಹೆದ್ದಾರಿ ರಸ್ತೆ ಎಂಜಿನಿಯರ್ ವೀರೇಶ ಪಾಟೀಲ ಪ್ರತಿಕ್ರಿಯಿಸಿದರು.

ನಾಗರಾಳ ಎಸ್.ಪಿ, ಚೊಳಚಗುಡ್ಡ, ನಸಬಿ, ನವಿಲುಹೊಳೆ, ಮುಮರಡ್ಡಿಕೊಪ್ಪ ಮತ್ತು ನೆಲವಗಿ ಗ್ರಾಮದ ರೈತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.