ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀಳಗಿ | ಫಸಲ್ ಭೀಮಾ: ಆಕ್ಷೇಪಣೆಗೆ ಅರ್ಜಿ ಆಹ್ವಾನ

Published 27 ಫೆಬ್ರುವರಿ 2024, 14:48 IST
Last Updated 27 ಫೆಬ್ರುವರಿ 2024, 14:48 IST
ಅಕ್ಷರ ಗಾತ್ರ

ಬೀಳಗಿ: ತಾಲ್ಲೂಕಿನ ರೈತರು ಮುಂಗಾರು ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ವಿಮೆ ಮಾಡಿಸಿದ ಬೆಳೆ ಹಾಗೂ ಪಹಣಿಯಲ್ಲಿ ದಾಖಲಾದ ಬೆಳೆ ವ್ಯತ್ಯಾಸದಿಂದ ಮುಂಗಾರು ಹಂಗಾಮಿನಲ್ಲಿ 52 ಹಾಗೂ ಹಿಂಗಾರು ಹಂಗಾಮಿನಲ್ಲಿ 4 ಅರ್ಜಿಗಳು ತಿರಸ್ಕೃತಗೊಂಡಿವೆ.

ರೈತರ ವಿವರವನ್ನು ಬೀಳಗಿ ತಾಲ್ಲೂಕಿನ ಕೃಷಿ / ತೋಟಗಾರಿಕೆ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರ, ಬೀಳಗಿ/ಅನಗವಾಡಿ ಕಚೇರಿಗಳ ಸೂಚನಾ ಫಲಕಗಳ ಮೇಲೆ ಅಳವಡಿಸಲಾಗಿದೆ.

ಈ ಕುರಿತು ಆಕ್ಷೇಪಣೆ ಇದ್ದಲ್ಲಿ ಮರು ಪರಿಶೀಲನೆಗೆ ರೈತರು ಪ್ರಕಟಣೆಯ ದಿನಾಂಕದಿಂದ 15 ದಿನದೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಪ್ರಕಟಣೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಆಕ್ಷೇಪಣೆಗೆ ಸಲ್ಲಿಸಲು ಬೇಕಾದ ದಾಖಲಾತಿಗಳು:  2022-23 ರ ಪಹಣಿ ಪತ್ರಿಕೆಯಲ್ಲಿ (ಆರ್‌ಟಿಸಿ) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. ಬೆಂಬಲ ಬೆಲೆ ಪ್ರಯೋಜನೆ ಪಡೆದ ರಶೀದಿ ಹಾಗೂ ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ರಶೀದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT