ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಕೊರೊನಾ ಸೋಂಕಿನಿಂದ ಐವರ ಸಾವು

ಗುಣಮುಖರಾದ 172 ಮಂದಿ ಆಸ್ಪತ್ರೆಯಿಂದ ಬಿಡುಗಡೆ
Last Updated 21 ಆಗಸ್ಟ್ 2020, 14:38 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಲ್ಲಿ ಶುಕ್ರವಾರ 64 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಕೋವಿಡ್‌ನಿಂದಾಗಿ ಇಬ್ಬರು ಮಹಿಳೆಯರು ಸೇರಿ ಒಟ್ಟು ಐವರು ಮೃತಪಟ್ಟಿದ್ದಾರೆ.

ಬಸವಕಲ್ಯಾಣ ಬುಧವಾರಪೇಟೆಯ 58 ವರ್ಷದ ಪುರುಷ ಉಸಿರಾಟ ತೊಂದರೆಯಿಂದಾಗಿ ಆಗಸ್ಟ್ 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. 14 ರಂದು ವೈದ್ಯಕೀಯ ವರದಿ ಪಾಸಿಟಿವ್‌ ಬಂದಿತ್ತು. ಚಿಕಿತ್ಸೆ ಫಲಿಸದೆ 20ರಂದು ಸಾವಿಗೀಡಾಗಿದ್ದಾರೆ.

ಬೀದರ್‌ನ ಓಲ್ಡ್‌ಸಿಟಿಯ 58 ವರ್ಷದ ಮಹಿಳೆ ಅಧಿಕ ರಕ್ತದೊತ್ತಡದಿಂದ ಆಗಸ್ಟ್ 19 ರಂದು ಆಸ್ಪತ್ರೆಗೆ ದಾಖಲಾಗಿ ಅದೇ ದಿನ ಕೊನೆಯುಸಿರೆಳೆದಿದ್ದರು. 20 ರಂದು ವರದಿ ಪಾಸಿಟಿವ್‌ ಬಂದಿದೆ. ಭಾಲ್ಕಿ ತಾಲ್ಲೂಕಿನ ಆಳಂದಿಯ 72 ವರ್ಷದ ಪುರುಷ 14 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನವೇ ವರದಿ ಪಾಸಿಟಿವ್‌ ಬಂದಿತ್ತು. ಚಿಕಿತ್ಸೆ ಫಲಿಸದೆ 20ರಂದು ಮೃತಪಟ್ಟಿದ್ದಾರೆ.

ಹುಮನಾಬಾದ್ ತಾಲ್ಲೂಕಿನ ಸೋನಕೇರಾದ 65 ವರ್ಷದ ಮಹಿಳೆ ತೀವ್ರ ಉಸಿರಾಟ ತೊಂದರೆಯಿಂದ ಆಗಸ್ಟ್ 14 ರಂದು ಆಸ್ಪತ್ರೆಗೆ ಬಂದಿದ್ದರು. ಗಂಟಲು ದ್ರವ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಆಗಸ್ಟ್‌ 16 ರಂದು ವರದಿ ಪಾಸಿಟಿವ್ ಬಂದಿತ್ತು. ಚಿಕಿತ್ಸೆ ಫಲಿಸದೆ ಆಗಸ್ಟ್ 20ರಂದು ಮೃತಪಟ್ಟಿದ್ದರು. ಆರೋಗ್ಯ ಇಲಾಖೆ ಶುಕ್ರವಾರ ವರದಿ ಬಹಿರಂಗ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT