ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮಖಂಡಿ | ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಧನಸಹಾಯ

Published 31 ಜನವರಿ 2024, 14:12 IST
Last Updated 31 ಜನವರಿ 2024, 14:12 IST
ಅಕ್ಷರ ಗಾತ್ರ

ಜಮಖಂಡಿ: ತಾಲ್ಲೂಕಿನ ಆಲಗೂರ ಮಹಾವೀರ ಶಾಲಾ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ನಡೆದ ಅಪಘಾತದಲ್ಲಿ ಮೃತಪಟ್ಟ ಕವಟಗಿ ಗ್ರಾಮದ ನಾಲ್ವರು ವಿದ್ಯಾರ್ಥಿಗಳ ಕುಟುಂಬದವರಿಗೆ ತಲಾ ₹ 1 ಲಕ್ಷ, ಗಂಭೀರ ಗಾಯಗಳಾದ ನಾಲ್ವರಿಗೆ ತಲಾ ₹ 25 ಸಾವಿರವನ್ನು ವೈಯಕ್ತಿಕವಾಗಿ ವಿಧಾನ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ ನೀಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ವಿಶೇಷ ಸಭೆ ಮಾಡಿ ಜಾಗೃತಿ ಮೂಡಿಸಬೇಕು. ಕಡ್ಡಾಯವಾಗಿ ನಿಯಮ ಪಾಲಿಸುವಂತೆ ಸೂಚನೆ ನೀಡಬೇಕು. ಇದನ್ನು ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ ಜರುಗಿಸಬೇಕು’ ಎಂದು ಉಪವಿಭಾಗಾಧಿಕಾರಿಗೆ ಸೂಚನೆ ನೀಡಿದರು.

ಶಾಲಾ ವಾಹನಗಳಲ್ಲಿ ಆಸನಗಳ ಅನುಸಾರವಾಗಿ ಮಕ್ಕಳನ್ನು ಕರೆದುಕೊಂಡು ಹೋಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಭರ್ತಿಮಾಡಿಕೊಂಡು ಹೋದಲ್ಲಿ ಇಂತಹ ಅಪಘಾತಗಳು ನಡೆಯುವ ಸಾಧ್ಯತೆ ಇರುತ್ತವೆ. ಇದರ ಬಗ್ಗೆ ಶಾಲಾ ಮುಖ್ಯಸ್ಥರು, ಮುಖ್ಯಗುರುಗಳು ನಿಗಾ ವಹಿಸಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ ನಂಜೇಯ್ಯನಮಠ, ಮಾಜಿ ಶಾಸಕ ಆನಂದ ನ್ಯಾಮಗೌಡ, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ತಹಶೀಲ್ದಾರ ಸಂತೋಷ ಮಕ್ಕೋಜಿ, ಅರುಣಕುಮಾರ ಶಹಾ, ರವಿ ಯಡಹಳ್ಳಿ, ಸಿದ್ದು ಮೀಸಿ, ದಾನೇಶ ಘಾಟಗೆ, ಈಶ್ವರ ವಾಳೆನ್ನವರ, ಬಸವರಾಜ ಹರಕಂಗಿ ರೋಹಿತ ಸೂರ್ಯವಂಶಿ, ಮಲ್ಲು ಶಿರಹಟ್ಟಿ ವಿ.ಪಿ ಬಾಗೇನ್ನವರ, ನರಸಿಂಹ ಕುಲ್ಲೋಳ್ಳಿ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT