ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾದಾಮಿ | ಬೋಧನೆಗೆ ಹೆಚ್ಚಿನ ಅವಕಾಶ ಕೊಡಿ: ದೇಶಪಾಂಡೆ

Published : 9 ನವೆಂಬರ್ 2023, 15:56 IST
Last Updated : 9 ನವೆಂಬರ್ 2023, 15:56 IST
ಫಾಲೋ ಮಾಡಿ
Comments

ಬಾದಾಮಿ: ‘ರಾಣಿಚನ್ನಮ್ಮ ವಿಶ್ವ ವಿದ್ಯಾಲಯದಿಂದ ಬೇರ್ಪಟ್ಟು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನೂತನ ವಿಶ್ವವಿದ್ಯಾಲಯ ಆರಂಭವಾಗಿದೆ. ಹೆಚ್ಚಿನ ಪ್ರಮಾಣದ ಅವಧಿಯನ್ನು ಪಡೆದು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕಗೆ ತೊಂದರೆಯಾದಂತೆ ಪಠ್ಯಕ್ರಮವನ್ನು ಮುಗಿಸಬೇಕು’ ಎಂದು ಬಾಗಲಕೋಟೆ ವಿಶ್ವ ವಿದ್ಯಾಲಯದ ಕುಲಪತಿ ಆನಂದ ದೇಶಪಾಂಡೆ ಹೇಳಿದರು.

ಇಲ್ಲಿನ ಎಸ್.ಬಿ.ಮಮದಾಪೂರ ಪದವಿ ಕಾಲೇಜಿನಲ್ಲಿ ಬುಧವಾರ ಜಮಖಂಡಿಯಲ್ಲಿ ನೂತನವಾಗಿ ಆರಂಭಿಸಿದ ಬಾಗಲಕೋಟೆ ಜಿಲ್ಲಾ ವಿಶ್ವವಿದ್ಯಾಲಯದ ಪದವಿ ಕಾಲೇಜುಗಳ ಪ್ರಾಚಾರ್ಯರ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರಥಮ ಸೆಮಿಸ್ಟರ್ ತಡವಾಗಿ ಆರಂಭವಾಗಿದೆ. ಉಪನ್ಯಾಸಕರು ಮೌಲ್ಯಮಾಪನಕ್ಕಾಗಿ ಹೋಗುವುದು ಅನಿವಾರ್ಯವಾಗಿದೆ. ಮುಂಬರುವ ದಿನಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು’ ಎಂದರು.

‘ಪದವಿ ಕಾಲೇಜಿನ ಪ್ರಶ್ನೆಪತ್ರಿಕೆಗಳು ಆನ್‌ಲೈನ್ ಮೂಲಕ ಕಾಲೇಜಿನ ಮೇಲ್ ಗೆ ಕಳಿಸಲಾಗುತ್ತಿದೆ. ಆಯಾ ಕಾಲೇಜಿನ ಪ್ರಾಚಾರ್ಯರು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಕುಲಸಚಿವ ಷಣ್ಮುಖಪ್ಪ ಅಂಗಡಿ ಹೇಳಿದರು.

ಬಾಗಲಕೋಟೆ ವಿಶ್ವವಿದ್ಯಾಲಯದ ಜಿಲ್ಲೆಯ ಎಲ್ಲ ಪದವಿ ಕಾಲೇಜಿನ ಪ್ರಾಚಾರ್ಯರು ಸಭೆಯಲ್ಲಿ ಇದ್ದರು. ಪ್ರಾಚಾರ್ಯ ರವೀಂದ್ರ ಮೂಲಿಮನಿ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT