ಬಾಗಲಕೋಟೆ: ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಸದಿದ್ದರೆ, ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಕಟ್ಟಿಸಿರುವ ಅಲ್ಲಿನ ಸುವರ್ಣಸೌಧವನ್ನು ಬಾಡಿಗೆಗಾದರೂ ಕೊಡಲಿ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು.

ಬನಹಟ್ಟಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಎರಡು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ಕರೆದಿಲ್ಲ. ಸುವರ್ಣ ಸೌಧದಲ್ಲಿನ ಟೇಬಲ್, ಕುರ್ಚಿಗಳನ್ನು ಹೆಗ್ಗಣ ತಿನ್ನುತ್ತಿವೆ. ಇದು ಉತ್ತರ ಕರ್ನಾಟಕದ ಬಗ್ಗೆ ಈ ಸರ್ಕಾರಕ್ಕೆ ಇರುವ ನಿರ್ಲಕ್ಷ್ಯ ಧೋರಣೆ ತೋರಿಸುತ್ತದೆ ಎಂದು ಕಿಡಿಕಾರಿದರು.

’ಸಿಎಂ ಸ್ಥಾನಕ್ಕೆ ಈಗಲೇ ಪೈಪೋಟಿ ನಡೆಸುತ್ತಿರುವ ರಾಜ್ಯದ ಕಾಂಗ್ರೆಸ್ ನಾಯಕರು ಮದುವೆಗೆ ಮುಂಚೆ ಮಕ್ಕಳು ಮಾಡೋಕೆ ಹೊರಟಿದ್ದಾರೆ‘ ಎಂದು ಡಿಸಿಎಂ ಗೋವಿಂದ ಕಾರಜೋಳ ಮಾಡಿರುವ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ’ಮಗು ಆಗುತ್ತೆ ಅಂತಾ ಅವರಿಗೂ ಗೊತ್ತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತಾ ಗೊತ್ತಾಗಿದೆ. ಬಹಳ ಸಂತೋಷದ ವಿಚಾರ. ಕಾರಜೋಳ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ‘ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.