ರಬಕವಿ ಬನಹಟ್ಟಿ: ಹಿಡಕಲ್ ಜಲಾಶಯದಿಂದ ಜಿಎಲ್ಬಿಸಿ ಕಾಲುವೆಗೆ ನೀರು ಬಿಟ್ಟಿದ್ದು ತೇರದಾಳ, ರಬಕವಿ ಬನಹಟ್ಟಿ, ಸುಲ್ತಾನಪುರ, ಮಹಾಲಿಂಗಪುರ ಕೆರೆಗಳು, ಶಿರೋಳ, ಮರೆಗುದ್ದಿ, ಮಧುರಖಂಡಿ ಕೆರೆಗಳನ್ನು ತುಂಬಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್, ಚಿಕ್ಕೋಡಿ ಉಪವಿಭಾಗಾಧಿಕಾರಿ, ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ, ಜಿಎಲ್ಬಿಸಿ ಕಾಲುವೆಯ ಕಾರ್ಯನಿರ್ವಾಹಕ ಎಂಜಿನಿಯರ್, ಕರ್ನಾಟಕ ನೀರಾವರಿ ನಿಗಮ ನಿಯಮಿತ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ನೀರು ಹರಿಯುವುದನ್ನು ಪರಿಶೀಲನೆ ಮಾಡಿದರು.

ಮೇ 28ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕಾಲುವೆಗೆ ನೀರು ಹರಿ ಬಿಡುವ ಕುರಿತು ವಾಚ್ ಮತ್ತು ವಾರ್ಡ್ ಮತ್ತು ಕೆರೆಗಳು ತುಂಬಿರುವ ಪ್ರಗತಿ ಕುರಿತು ಉಪವಿಭಾಗಾಧಿಕಾರಿಗಳು ಜಮಖಂಡಿ, ಜಮಖಂಡಿ ಉಪವಿಭಾಗ ಪೊಲೀಸ್ ಅಧೀಕ್ಷಕರು, ಕರ್ನಾಟಕ ನೀರಾವರಿ ನಿಮಗದ ಕಾರ್ಯ ನಿರ್ವಾಹಕ ಎಂಜಿನಿಯರ್, ಜಿಎಲ್ಬಿಸಿ ಅಧಿಕಾರಿಗಳು ಹಾಗೂ ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಹಶೀಲ್ದಾರ್ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಿದ್ದು, ಇವರು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ತಿಳಿಸಿದರು.

ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-19-195759411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.