ಶುಕ್ರವಾರ, ಜೂಲೈ 10, 2020
22 °C

ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ: ಬಾಗಲಕೋಟೆ ಜಿಲ್ಲೆ ಸಂಪೂರ್ಣ ಸ್ತಬ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಭಾನುವಾರದ ಲಾಕ್‌ಡೌನ್‌ಗೆ ಬಾಗಲಕೋಟೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಿಷೇದಾಜ್ಞೆ ಇರಲಿದೆ. ಯಾರೂ ಮನೆಯಿಂದ ಹೊರ ಬರಬೇಡಿ ಎಂದು ಜಿಲ್ಲಾಡಳಿತ ಗ್ರಾಮೀಣ ಪ್ರದೇಶಗಳಲ್ಲಿ ಡಂಗುರ ಸಾರಿಸಿತ್ತು. ನಗರಗಳಲ್ಲಿ ಧ್ವನಿವರ್ಧಕ ಹೊತ್ತ ಆಟೊಗಳಲ್ಲಿ ಪ್ರಚಾರ ನಡೆಸಿತ್ತು. ಅದೀಗ ಫಲ ನೀಡಿದೆ. 

ಭಾನುವಾರದ ಬಂದ್ ಕಾರಣ ಅಗತ್ಯ ವಸ್ತುಗಳನ್ನು ಶನಿವಾರವೇ ಜನರು ಮುಗಿಬಿದ್ದು ಖರೀದಿಸಿದ್ದರು. ಹೀಗಾಗಿ ಮರುದಿನ ರಸ್ತೆಗೆ ಬರುವ ಪ್ರಮೇಯ ಬಂದಿಲ್ಲ.

ಹಾಲು, ಮೆಡಿಕಲ್ ಶಾಪ್, ಆಸ್ಪತ್ರೆ ಹಾಗೂ ಮಾಂಸದಂಗಡಿ ತೆರೆಯಲು ಮಾತ್ರ ಅವಕಾಶ ನೀಡಲಾಗಿದೆ. ಮದ್ಯ ಮಾರಾಟ ಬಂದ್ ಆಗಿದೆ. ಸಮೂಹ ಸಾರಿಗೆ ಮಾತ್ರವಲ್ಲ ಖಾಸಗಿ ವಾಹನಗಳು ರಸ್ತೆಗೆ ಇಳಿಯಲು ಅವಕಾಶ ನೀಡಿಲ್ಲ. ಹೀಗಾಗಿ ಬಾಗಲಕೋಟೆಯ ಪ್ರಮುಖ ರಸ್ತೆಗಳು ನಿರ್ಜನಗೊಂಡಿವೆ. ಇಡೀ ನಗರ ಬಿಕೊ ಎನ್ನುತ್ತಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು