ಬಾಗಲಕೋಟೆ: ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹ ಮತ್ತಿತರ ಕಾಮಗಾರಿಗಳಿಗೆ ₹450 ಕೋಟಿ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿರುವುದು ಕಾಲೇಜು ಆರಂಭದ ಕಾರ್ಯಕ್ಕೆ ಮತ್ತಷ್ಟು ಚುರುಕು ಸಿಕ್ಕಿದೆ.

ಕಾಲೇಜು ಆರಂಭವನ್ನು ಘೋಷಿಸಿದ್ದ ಸರ್ಕಾರವು, ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಕಾಲೇಜು, ವಸತಿ ನಿಲಯ ನಿರ್ಮಾಣಕ್ಕೆ ಜಾಗ ನೀಡಲು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರವೂ ಮುಂದಾಗಿದೆ. ಈ ಚಟುವಟಿಕೆಗಳ ನಡುವೆಯೆ ಅನುದಾನಕ್ಕೂ ಒಪ್ಪಿಗೆ ದೊರೆತಿದೆ.

ವೈದ್ಯಕೀಯ ಕಾಲೇಜಿಗೆ 2025-26ನೇ ಸಾಲಿನ ಹಣಕಾಸು ವರ್ಷದಲ್ಲಿ ₹75 ಕೋಟಿ, 2026-27ನೇ ಸಾಲಿನಲ್ಲಿ ₹125 ಕೋಟಿ, 2027-28ನೇ ಸಾಲಿನಲ್ಲಿ ₹125 ಕೋಟಿ, 2028-29ನೇ ಸಾಲಿನಲ್ಲಿ ₹125 ಕೋಟಿ ನೀಡಲಾಗುತ್ತದೆ ಎಂದು ಶಾಸಕ ಎಚ್.ವೈ. ಮೇಟಿ ತಿಳಿಸಿದ್ದಾರೆ.

ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ಇದಕ್ಕಾಗಿ ಸಾಕಷ್ಟು ಪ್ರಯತ್ನಿಸಿದ್ದು, ಕ್ಷೇತ್ರದ ಜನತೆಗೆ ತಿಳಿದಿದೆ. ಆ ಕನಸು ಈಗ ಈಡೇರುತ್ತಿದೆ ಎಂದು ಹೇಳಿದ್ದಾರೆ.

ಕಾಲೇಜಿಗೆ ಬೇಕಾದ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಉಮೇಶ ಮೇಟಿ, ಎಚ್.ಎನ್. ರಾಂಪೂರ, ನಾರಾಯಣ ದೇಸಾಯಿ, ದ್ಯಾಮಣ್ಣ ಗಾಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.