ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಬಕವಿ ಬನಹಟ್ಟಿ: ಸರ್ಕಾರಿ ಪಬ್ಲಿಕ್‌ ಶಾಲೆ ಪ್ರವೇಶಕ್ಕೆ ಮುಗಿಬಿದ್ದ ಜನ

Published 2 ಜೂನ್ 2024, 13:52 IST
Last Updated 2 ಜೂನ್ 2024, 13:52 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ಸಮೀಪದ ನಾವಲಗಿ ಗ್ರಾಮದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಎಲ್‌ಕೆಜಿ ಪ್ರವೇಶಕ್ಕಾಗಿ ನಾವಲಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಪಾಲಕರು ರಾತ್ರಿಯೆಲ್ಲಾ ಸರತಿಯಲ್ಲಿ ನಿಂತರು.

ಈ ಭಾಗದಲ್ಲಿ ನಾವಲಗಿ ಗ್ರಾಮದ ಶಾಲೆಯಲ್ಲಿ ಮಾತ್ರ ಕರ್ನಾಟಕ ಪಬ್ಲಿಕ್ ಶಾಲೆ ಕಾರ್ಯ ನಿರ್ವಹಿಸುತ್ತಿದೆ. ಇದರಿಂದಾಗಿ ಗ್ರಾಮಸ್ಥರು ತಮ್ಮ ಮಕ್ಕಳನ್ನು ಇಂಗ್ಲಿಷ್ ಶಾಲೆಗೆ ಸೇರಿಸಲು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಕೇವಲ ಮೂವತ್ತು ವಿದ್ಯಾರ್ಥಿಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುವುದರಿಂದ ಪಾಲಕರು ಪ್ರವೇಶಕ್ಕಾಗಿ ಮುಗಿ ಬೀಳುತ್ತಿದ್ದಾರೆ.

ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಪಾಲಕರು ರಾತ್ರಿ ಎರಡು ಗಂಟೆಗೆ ಬಂದು ಸರತಿಯಲ್ಲಿ ನಿಂತಿದ್ದಾರೆ.

ಈಗಾಗಲೇ ಮೂವತ್ತು ಪ್ರವೇಶಗಳನ್ನು ಪಡೆದುಕೊಳ್ಳಲಾಗಿದೆ. ಹೆಚ್ಚುವರಿ ಪ್ರವೇಶಗಳಿಗೆ ಮೇಲಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಮನವಿ ಮಾಡಿಕೊಳ್ಳಲಾಗಿದೆ. ಎಸ್‌ಡಿಎಂಸಿ ಸದಸ್ಯರು ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಸರ್ಕಾರಿ ಪಬ್ಲಿಕ್ ಶಾಲೆ ಮುಖ್ಯ ಶಿಕ್ಷಕ ಎಂ.ಎ. ಕಾತ್ರಾಳ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT