ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: 9 ತಾಲ್ಲೂಕು ಕೇಂದ್ರಗಳಲ್ಲಿ ಎಣಿಕೆ ಕಾರ್ಯಕ್ಕೆ ಸಿದ್ದತೆ

ಗ್ರಾಮ ಪಂಚಾಯ್ತಿ ಚುನಾವಣೆ ಮತ ಎಣಿಕೆ
Last Updated 30 ಡಿಸೆಂಬರ್ 2020, 2:13 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಎರಡು ಹಂತದಲ್ಲಿ ಮತದಾನ ನಡೆದಿದ್ದು, ಬುಧವಾರ ಬೆಳಗ್ಗೆ 8 ರಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಜಿಲ್ಲೆಯ 9 ತಾಲ್ಲೂಕು ಕೇಂದ್ರಗಳಲ್ಲೂ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ.

ಮೊದಲ ಹಂತ ಹಾಗೂ ಎರಡನೇ ಹಂತ ಸೇರಿ ಒಟ್ಟು 191 ಗ್ರಾಮ ಪಂಚಾಯ್ತಿಗಳ 1038 ಕ್ಷೇತ್ರಗಳ 2777 ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿದೆ. ಎಣಿಕೆಗೆ ಒಟ್ಟು 167 ಕೊಠಡಿಗಳಲ್ಲಿ ಒಟ್ಟು 444 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. 40 ಟೇಬಲ್‍ಗಳನ್ನು ಕಾಯ್ದಿರಿಸಲಾಗಿದೆ. ಪ್ರತಿ ಟೇಬಲ್‍ಗೆ ಒಬ್ಬ ಮೇಲ್ವಿಚಾರಕ ಮತ್ತು ಇಬ್ಬರು ಎಣಿಕೆ ಸಹಾಯಕರು ಸೇರಿ ಒಟ್ಟು 1452 ಜನರನ್ನು ನೇಮಕ ಮಾಡಲಾಗಿದೆ.

ಬಾಗಲಕೋಟೆ ತಾಲ್ಲೂಕಿನಲ್ಲಿ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ,ಬಾದಾಮಿ ತಾಲ್ಲೂಕಿನಲ್ಲಿ ವೀರ ಪುಲಿಕೇಶಿ ವಿದ್ಯಾವರ್ಧಕ ಸಂಘ,. ಗುಳೇದಗುಡ್ಡದ ಸರ್ಕಾರಿ ಪದವಿ ಪೂರ್ವ ಕಾಲೇಜು, ಹುನಗುಂದ ವಿಜಯ ಮಹಾಂತೇಶ ಪ್ರೌಢಶಾಲೆ, ಇಳಕಲ್ ಸರ್ಕಾರಿ ಪದವಿ ಪೂರ್ವ ಕಾಲೇಜು, ಜಮಖಂಡಿ ಪಿ.ಬಿ.ಕಾಲೇಜು, ಮುಧೋಳ ಆರ್.ಎಂ.ಜಿ ಕಾಲೇಜು, ಬೀಳಗಿ ಸಿದ್ದೇಶ್ವರ ಪದವಿ ಪೂರ್ವ ಕಾಲೇಜು, ರಬಕವಿ-ಬನಹಟ್ಟಿ ಜನತಾ ಶಿಕ್ಷಣ ಸಂಸ್ಥೆ, ಎಸ್.ಟಿ.ಸಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT