ಬೀಳಗಿ: ಕಾಂಗ್ರೆಸ್ ನುಡಿದಂತೆ ನಡೆದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಇದರಿಂದ ಮಹಿಳೆಯರು, ಬಡವರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ನಿರುದ್ಯೋಗಿ ಯುವಕರಿಗೂ ನೆರವು ದೊರೆತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಹೇಳಿದರು.

ತಾಲ್ಲೂಕಿನ ಸೊನ್ನ, ಸಿದ್ದಾಪುರ ಹಾಗೂ ತೆಗ್ಗಿ ಗ್ರಾಮದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ವೆಂಕನಗೌಡ ಪಾಟೀಲ ಮಾತನಾಡಿ, ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿದ್ದು, ತಾಂತ್ರಿಕ ಲೋಪದೋಷಗಳಿಂದ ಕೆಲವರಿಗೆ ಯೋಜನೆಗಳ ಲಾಭ ತಲುಪಿಲ್ಲ. ಅವರಿಗೆ ನೆರವಾಗಲು ಈ ಕುಂದುಕೊರತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಗ್ಯಾರಂಟಿ ನಿರ್ದೇಶಕ ರಸೂಲಸಾಬ ಮುಜಾವಾರ, ಚಂದ್ರಶೇಖರ ಪಂಡರಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿಗೆ ಸಾಕಷ್ಟು ಅನುಕೂಲವಾಗಿವೆ ಎಂದರು.

ತಾಲ್ಲೂಕು ಪಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದು ನಕ್ಕರಗುಂದಿ, ಹೆಸ್ಕಾಂ ಇಲಾಖೆಯ ಮಂಜುನಾಥ ಬೊಕಿ, ಆಹಾರ ಇಲಾಖೆಯ ಎ.ಎಲ್.ಸನದಿ, ಎಸ್.ಕೆ. ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ಮೇಲ್ವಿಚಾರಕಿ ಸುರೇಖಾ ಹಂಚಿನಾಳ ಇದ್ದರು.

ತೆಗ್ಗಿ ಪಿಕೆಪಿಎಸ್ ಅಧ್ಯಕ್ಷ ಮಲ್ಲಪ್ಪ ಕಾಳಗಿ, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಸೋಮನಗೌಡ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ ಭೂಸರಡ್ಡಿ, ಭಾನುಬಿ ಜೈನಾಪುರ ಇದ್ದರು.

ಫಲಾನುಭವಿಗಳೊಂದಿಗೆ ಸಂವಾದ: ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಮಿತಿ ಸದಸ್ಯರು ಸಂವಾದ ನಡೆಸಿದರು. ಈಗಾಗಲೇ ಈ ಯೋಜನೆಯಿಂದ ಹಲವು ಕುಟುಂಬಗಳಿಗೆ ನೆರವಾಗಿದೆ. ಕೌಟುಂಬಿಕ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ, ಔಷಧಿ ನೆರವು ಸೇರಿದಂತೆ ಶಸ್ತ್ರ ಚಿಕಿತ್ಸೆಗೂ ಹಲವು ರೂಪದಲ್ಲಿ ಗೃಹಲಕ್ಷ್ಮಿ, ಯುವನಿಧಿ, ಶಕ್ತಿ ಯೋಜನೆಗಳು ನೆರವು ಆಗಿರುವ ಬಗ್ಗೆ ಫಲಾನುಭವಿಗಳಿಂದ ಮಾಹಿತಿ ಪಡೆದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ಯೋಜನೆಗಳ ಅಡಿ ಯಾವುದೇ ರೀತಿಯ ದೂರುಗಳಿದ್ದಲ್ಲಿ ಸಾಕ್ಷ್ಯಗಳ ಆಧಾರದಲ್ಲಿ ಅವಶ್ಯಕ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.