ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಳೇದಗುಡ್ಡ | ಗುಡುಗು ಸಹಿತ ಭಾರಿ ಮಳೆ

Published 6 ಜೂನ್ 2024, 15:51 IST
Last Updated 6 ಜೂನ್ 2024, 15:51 IST
ಅಕ್ಷರ ಗಾತ್ರ

ಗುಳೇದಗುಡ್ಡ: ಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಗುರುವಾರ ಸಂಜೆ 4.30ಕ್ಕೆ ಆರಂಭವಾದ ಮಳೆ ಒಂದು ತಾಸು ಮಳೆ ಸುರಿಯಿತು.

ಪಟ್ಟಣದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಳೆ ನೀರು ನುಗ್ಗಿ ಮೈದಾನದ ತುಂಬ ತುಂಬಿದೆ. ಹೆಚ್ಚುವರಿ ನೀರು ಹೊರಗೆ ಹೋಗಲು ಸರಿಯಾದ ವ್ಯವಸ್ಥೆ ಇಲ್ಲದ್ದರಿಂದ ನೀರು ಮೈದಾನ ತುಂಬಿಕೊಂಡಿದೆ.

ರೈತರ ಸಂತಸ: ಪಟ್ಟಣದ ಸುತ್ತಲಿನ ಗ್ರಾಮಗಳಲ್ಲಿ ಸುರಿದ ಮಳೆಯಿಂದ ರೈತರು ಸಂತಸಗೊಂಡಿದ್ದಾರೆ. ಕೆಲವು ರೈತರು ಮುಂಗಾರು ಬೆಳೆಯಾಗಿ ಹೆಸರು, ಹೈಬ್ರೀಡ್‌ ಜೋಳ, ಗೋವಿನ ಜೋಳ ಬಿತ್ತನೆ ಮಾಡಿದ್ದು, ಮಳೆ ಅನುಕೂಲವಾಯಿತು.

ಗುಳೇದಗುಡ್ಡದಲ್ಲಿ ಗುಡುಗು ಸಹಿತ ಮಳೆ ಸುರಿಯಿತು
ಗುಳೇದಗುಡ್ಡದಲ್ಲಿ ಗುಡುಗು ಸಹಿತ ಮಳೆ ಸುರಿಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT