ಗುಳೇದಗುಡ್ಡ: ತಾಲ್ಲೂಕಿನ ಕೋಟೆಕಲ್ ಗ್ರಾಮದ ಅಮರೇಶ್ವರ ಬ್ರಹನ್ಮಠದ ಅಮರೇಶ್ವರ ಜನಕಲ್ಯಾಣ ಪ್ರತಿಷ್ಠಾನದ ವತಿಯಿಂದ ಮೇ 13 ಹಾಗೂ 14ರಂದು ಅಮರೇಶ್ವರ ಶ್ರೀಗಳ 57ನೇ ಪುಣ್ಯಸ್ಮರಣೆ, ಬಸಯ್ಯ ಸ್ವಾಮಿಗಳು, ಲಕ್ಷ್ಮೀಬಾಯಿ ಅಮ್ಮನವರ ಸಂಸ್ಮರಣೋತ್ಸವ ಕಾರ್ಯಕ್ರಮ, ಅಮರ ಆದರ್ಶ ದಂಪತಿ ಸತ್ಕಾರ, ಅಮರ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಮಠದ ಪೀಠಾಧ್ಯಕ್ಷ ನೀಲಕಂಠ ಶಿವಾಚಾರ್ಯ ಶ್ರೀ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಾತನಾಡಿ, ‘ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಶ್ರೀ ಸಾನ್ನಿಧ್ಯ ವಹಿಸುವರು. ಮೇ 13ರಂದು ರಾತ್ರಿ 8ಕ್ಕೆ ಸಂಗೀತ ಮತ್ತು ಭಜನಾ ಕಾರ್ಯಕ್ರಮ ನಡೆಯಲಿದೆ.

14ರಂದು ಬೆಳಿಗ್ಗೆ 6ಕ್ಕೆ ಅಮರೇಶ್ವರ ಶ್ರೀಗಳ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿ ನಡೆಯಲಿದೆ. ವಿನಯಕುಮಾರ ಶಾಸ್ತ್ರಿ, ಕಾಶಿನಾಥ ಶಾಸ್ತ್ರಿ, ವಿಜಯಕುಮಾರ ಶಾಸ್ತ್ರಿ, ಗುರುಸಿದ್ದಯ್ಯ ಹಿರೇಮಠ, ಮಲ್ಲಿಕಾರ್ಜುನ ಶಾಸ್ತ್ರಿ ಪೌರೋಹಿತ್ಯ

ವಹಿಸುವರು. ಬೆಳಿಗ್ಗೆ8ಕ್ಕೆ ಪೀಠಾಧ್ಯಕ್ಷ

ನೀಲಕಂಠ ಶಿವಾಚಾರ್ಯ ಶ್ರೀಗಳಿಂದ ವಿಶ್ವ ಶಾಂತಿಗಾಗಿ ಮಹಾಮೃತ್ಯುಂಜಯ ಹೋಮ ನಡೆಯಲಿದೆ.

ನಂತರ ಅಮರ ಆದರ್ಶ ದಂಪತಿಗಳಿಗೆ ಸತ್ಕಾರ ಸಮಾರಂಭ, ಬೀಳಗಿಯ ಆಶುಕವಿ ಸಿದ್ದಪ್ಪ ಬಿದರಿ ಅವರಿಗೆ ಅಮರೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಾಶಿ ಪೀಠದ ಚಂದ್ರಶೇಖರ ಶೀವಾಚಾರ್ಯ ಶ್ರೀ ಸಾನ್ನಿಧ್ಯ ವಹಿಸುವರು. ಕೆರೂರು ಚರಂತಿಮಠದ ಶಿವಕುಮಾರ ಶ್ರೀ ಅಧ್ಯಕ್ಷತೆ ವಹಿಸುವರು. ವಿವಿಧ ಮಠಾಧೀಶರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ.

ಅತಿಥಿಗಳಾಗಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ, ಎಂ.ಕೆ. ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಟಿ. ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನಮಂತ ಮಾವಿನಮರದ, ಮುಖಂಡರಾದ ಹೊಳಬಸು ಶೆಟ್ಟರ, ಸಂಜಯ ಬರಗುಂಡಿ ಆಗಮಿಸುವರು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-19-201564893

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.