ಗುಳೇದಗುಡ್ಡ: ‘ಪ್ರಸ್ತುತ ದಿನದಲ್ಲಿ ಎಲ್ಲರೂ ಶಿಕ್ಷಣವಂತರಾದರೂ ಸಮಾಜದಲ್ಲಿ ವರದಕ್ಷಿಣೆ ಪಿಡುಗು ಹೋಗಿಲ್ಲ. ಮಹಿಳೆಯರಿಗೆ ಶಾಪವಾಗಿದೆ’ ಎಂದು ಜಿಲ್ಲಾ ಸಖಿ ಕೇಂದ್ರದ ಆಡಳಿತಾಧಿಕಾರಿ ಶಂಕ್ರಮ್ಮ ಜಮ್ಮನಕಟ್ಟಿ ಹೇಳಿದರು.

ಪಟ್ಟಣದ ಗುರುಸಿದ್ಧೇಶ್ವರ ಮಹಿಳಾ ಶಿಕ್ಷಣ(ಬಿ.ಎಡ್) ಮಹಾವಿದ್ಯಾಲಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವರದಕ್ಷಿಣೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಮಹಿಳೆ ಹಲವು ಸಮಸ್ಯೆ ಎದುರಿಸುತ್ತಿದ್ದಾಳೆ. ಹಲವು ರೀತಿಯ ಕಿರುಕುಳ, ಅತ್ಯಾಚಾರ, ಕುಟುಂಬ ಹಾಗೂ ಹಲವು ರಂಗಗಳಲ್ಲಿ ಮಹಿಳೆ ಶೋಷಿತಳಾಗಿ ಆತ್ಮಹತ್ಯೆ ಮಾಡಿಕೊಂಡ ಅದೆಷ್ಟೊ ಪ್ರಕರಣಗಳಿವೆ. ಮಹಿಳೆಯರು ತಮಗೆ ತೊಂದರೆಯಾದರೆ ಸಹಾಯವಾಣಿ ಸಂಖ್ಯೆ 181 ನಂಬರ್ಗೆ ಕರೆ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು’ ಎಂದರು.

ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೇಷಲಿಸ್ಟ್ ಕಮಲಾಕ್ಷಿ ಚೌವ್ಹಾಣ ಮಾತನಾಡಿ, ‘ಸರ್ಕಾರ ಮಹಿಳೆ ಮತ್ತು ಮಕ್ಕಳ ಅಭ್ಯುದಯಕ್ಕೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸೌಲಭ್ಯ ಪಡೆದುಕೊಳ್ಳಬೇಕು. ಅಂಗನವಾಡಿ ಮೂಲಕ ಮಕ್ಕಳಿಗೆ ಹಲವು ಸೌಲಭ್ಯ ನೀಡಲಾಗಿದೆ. ಅವುಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು’ ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯ ಎಚ್.ಎಸ್. ಘಂಟಿ ಮಾತನಾಡಿ, ಭಾವಿ ಶಿಕ್ಷಕರಾಗುವ ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಸರ್ಕಾರದ ಸೌಲಭ್ಯ ಪಡೆಯುವುದರ ಜೊತೆಗೆ ಮುಂದಿನ ಪೀಳಿಗೆ ಶೋಷಣೆಯಾಗದಂತೆ ಮಕ್ಕಳಿಗೆ ಮೌಲ್ಯಯುತವಾಗಿ ಮಾರ್ಗದರ್ಶನ ಮಾಡಬೇಕು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-19-1656809303

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.