ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುರುಸಿದ್ಧದೇವ ಶಿವಾಚಾರ್ಯರ ಪುಣ್ಯಸ್ಮರಣೋತ್ಸವ 17ರಂದು

Published 10 ಜುಲೈ 2024, 14:44 IST
Last Updated 10 ಜುಲೈ 2024, 14:44 IST
ಅಕ್ಷರ ಗಾತ್ರ

ಬಾದಾಮಿ: ಶಿವಯೋಗಮಂದಿರ ಸಮೀಪದ ಮಲಪ್ರಭಾ ನದಿ ದಂಡೆಯ ಬಸವೇಶ್ವರ ಪುಣ್ಯಕ್ಷೇತ್ರದಲ್ಲಿ ಜುಲೈ 17ರಂದು ಬಂದಗದ್ದೆ, ಕೆಳದಿ ಸಂಸ್ಥಾನ ರಾಜಗುರು ಹಿರೇಮಠ ಮತ್ತು ಮಂಗಳೂರ ಮಠದ ಗುರುಸಿದ್ಧದೇವ ಶಿವಾಚಾರ್ಯರ 15ನೇ ಪುಣ್ಯಸ್ಮರಣೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಸಂಸ್ಥಾನ ಹಿರೇಮಠ ಬಂದಗದ್ದೆ, ಕೆಳದಿ ಮಂಗಳೂರು ಮಠದ ಮೃತ್ಯುಂಜಯ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 6 ಗಂಟೆಗೆ ಗುಳೇದಗುಡ್ಡ ಮುರುಘಾಮಠದ ಕಾಶಿನಾಥ ಸ್ವಾಮೀಜಿ ಷಟ್ ಸ್ಥಲ ಧ್ವಜಾರೋಹಣ ನೆರವೇರಿಸುವರು. ಲಿಂ. ಗುರುಸಿದ್ಧದೇವ ಶಿವಾಚಾರ್ಯ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

11 ಗಂಟೆಗೆ ನಡೆಯವ ಧಾರ್ಮಿಕ ಸಮಾರಂಭದಲ್ಲಿ ಹುಬ್ಬಳ್ಳಿ ಮೂರುಸಾವಿರಮಠ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಜಡೆಯ ಶಾಂತಲಿಂಗ ಸ್ವಾಮೀಜಿ, ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸುವರು. ಪ್ರಭು ಚನ್ನಬಸವ ಸ್ವಾಮೀಜಿ, ಪ್ರಭುಕುಮರ ಸ್ವಾಮೀಜಿ, ಸದಾಶಿವ ಸ್ವಾಮೀಜಿ, ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ ಆಗಮಿಸುವರು.

‘ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಮಹಾಂತೇಶ ಮಮದಾಪೂರ, ಎಂ.ಬಿ. ಹಂಗರಗಿ, ಹನುಮಂತ ಮಾವಿನಮರದ, ಎಸ್.ಟಿ. ಪಾಟೀಲ ಭಾಗಿಯಾಗುವರು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT