ಮಂಗಳವಾರ, ಜನವರಿ 28, 2020
25 °C
ಪ್ರವಾಸೋದ್ಯಮ ಸಚಿವರಿಗೆ ಕರೆ ಮಾಡಿ ಒತ್ತಾಯಿಸಿದ ಸಿದ್ದರಾಮಯ್ಯ

ಹಂಪಿ ವಿ.ವಿ ಕೇಂದ್ರ ಅಲ್ಲಿಯೇ ಉಳಿಸಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಬಾದಾಮಿ ಸಮೀಪದ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು ಬೇರೆಡೆಗೆ ಎತ್ತಂಗಡಿ ಮಾಡದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಬಾದಾಮಿಯಲ್ಲಿ ಶುಕ್ರವಾರ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೆ ಕರೆ ಮಾಡಿ ಮಾತನಾಡಿದ ಸಿದ್ದರಾಮಯ್ಯ, ಆ ಜಾಗದಲ್ಲಿ ಉದ್ದೇಶಿತ ತ್ರಿ–ಸ್ಟಾರ್ ಹೋಟೆಲ್ ನಿರ್ಮಿಸುವ ಪ್ರಸ್ತಾವನೆ ಕೈ ಬಿಡುವಂತೆ ಆಗ್ರಹಿಸಿದರು.

ಬಾದಾಮಿ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಜಾಗ ಬೇರೆ ಬೇರೆ ಕಡೆ ಇದೆ. ಅಲ್ಲಿ ಹೋಟೆಲ್ ನಿರ್ಮಿಸುವುದು ಸೂಕ್ತ ಎಂದರು.

ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರಿಗೆ ಕರೆ ಮಾಡಿದ ಸಿದ್ದರಾಮಯ್ಯ, ’ಶಿಲ್ಪ ಮತ್ತು ಚಿತ್ರಕಲಾ ಕೇಂದ್ರದ ಸಿಬ್ಬಂದಿಗೆ ವೇತನ ವಿತರಣೆಯಲ್ಲಿ ಆಗಿರುವ ವಿಳಂಬವನ್ನು ಸರಿಪಡಿಸುವಂತೆ‘ ಹೇಳಿದರು.

ಪ್ರಜಾವಾಣಿ ವರದಿ ಫಲಶ್ರುತಿ: ಹೋಟೆಲ್ ನಿರ್ಮಾಣ ಹಿನ್ನೆಲೆ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಕೇಂದ್ರದ ಮುಖ್ಯಸ್ಥರಿಗೆ ಪತ್ರ ಬರೆದಿದ್ದರು. ಆ ಬಗ್ಗೆ ‘ಪ್ರಜಾವಾಣಿ’ ಡಿಸೆಂಬರ್ 3ರಂದು ವಿಶೇಷ ವರದಿ ಪ್ರಕಟಿಸಿತ್ತು. ಕೇಂದ್ರವನ್ನು ಅಲ್ಲಿಯೇ ಉಳಿಸಿಕೊಳ್ಳುವಂತೆ ಬಾದಾಮಿ ಪರಿಸರದ ವಿವಿಧ ಸಂಘಟನೆಗಳು ಗುರುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದವು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು