ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್ ನನ್ನ ಮಗ ಎಂದಿದ್ದ ಎಚ್‌ಡಿಕೆ: ಸಿದ್ದರಾಮಯ್ಯ ಕುಟುಕು

Published 3 ಮೇ 2024, 22:15 IST
Last Updated 3 ಮೇ 2024, 22:15 IST
ಅಕ್ಷರ ಗಾತ್ರ

ಬಾಗಲಕೋಟೆ:  ‘ಮಹಿಳೆಯರಿಗೆ ಅನ್ಯಾಯ ನಡೆದಿದೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕುಮಾರಸ್ವಾಮಿ, ಪ್ರಜ್ವಲ್ ನನ್ನ ಮಗ ಎಂದಿದ್ದರು. ಈಗ ಅವರ ಕುಟುಂಬವೇ ಬೇರೆ ಎನ್ನುತ್ತಿದ್ದಾರೆ. ಪ್ರಜ್ವಲ್ ವಿಡಿಯೊ ವಿಚಾರ ಬಿಜೆಪಿಯವರಿಗೆ ಮೊದಲೇ ಗೊತ್ತಿತ್ತು. ಆದರೂ, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜಕೀಯ ಮಾಡುವುದು, ಕುಕೃತ್ಯ ಮಾಡುವುದು,‌ ತಪ್ಪು ಮಾಡುವುದು ಒಟ್ಟಿಗೆ ಮಾಡುತ್ತಾರೆ‌. ಇಂತಹ ವಿಷಯ ಬಂದಾಗ ಬೇರೆ ಎನ್ನುತ್ತಾರೆ’ ಎಂದು ಲೇವಡಿ ಮಾಡಿದರು.

‘ಸಂತ್ರಸ್ತ ಮಹಿಳೆ ಅಪಹರಣ ಮಾಡಲಾಗಿದೆ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆ ಹೆಣ್ಣು‌ಮಗಳು ಎಲ್ಲಿ ಹೋಗಿದ್ದಾರೆ ಎಂದು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪ್ರಜ್ವಲ್‌ ಕುಟುಂಬ ಬೇರೆ ಎಂದಿದ್ದ ಕುಮಾರಸ್ವಾಮಿ, ವಕೀಲರನ್ನು ಕರೆಯಿಸಿ ಯಾಕೆ ಚರ್ಚೆ ಮಾಡುತ್ತಿದ್ದಾರೆ’ ಎಂದು ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT