ಸೋಮವಾರ, ಆಗಸ್ಟ್ 8, 2022
22 °C

ಹಿಪ್ಪರಗಿ ಜಲಾಶಯ: 97,000 ಕ್ಯೂಸೆಕ್‍ ಒಳ ಹರಿವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಬಕವಿ ಬನಹಟ್ಟಿ: ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಸಮೀಪದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಶುಕ್ರವಾರ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ತಾಲ್ಲೂಕಿನ ಹಿಪ್ಪರಗಿ ಜಲಾಶಯಕ್ಕೆ 97,000 ಕ್ಯೂಸೆಕ್‍ ನೀರು ಬಂದಿದೆ ಎಂದು ಜಲಾಶಯದ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಕೆ.ಜಾಲಿಬೇರಿ ತಿಳಿಸಿದರು. ಜಲಾಶಯದ ಹೊರ ಹರಿವು 96 ಸಾವಿರ ಕ್ಯೂಸೆಕ್ ಇದ್ದು, ಜಲಾಶಯದಲ್ಲಿ ನೀರಿನ ಮಟ್ಟ 521.00 ಮೀಟರ್ ಇದ್ದು, ಜಲಾಶಯದಲ್ಲಿ 2.62 ಟಿಎಂಸಿ ನೀರಿನ ಸಂಗ್ರಹವಿದೆ.

ಮಹಾರಾಷ್ಟ್ರದ ಕೊಯ್ನಾ 142 ಮಿ.ಮೀ, ವಾರಣಾ 80 ಮಿ.ಮೀ ದೂಧಗಂಗಾ 185 ಮಿ.ಮೀ, ರಾಧಾ ನಗರಿ 220 ಮಿ.ಮೀ ಮಳೆಯಾದ ವರದಿಯಾಗಿದೆ.

ಬೋಟ್ ಸೇವೆ ಬಂದ್: ಕೃಷ್ಣಾ ನದಿಯಲ್ಲಿ ನೀರಿನ ಹರಿವು ತೀವ್ರವಾಗಿರುವುದರಿಂದ ರಬಕವಿ, ಬನಹಟ್ಟಿ, ಜಮಖಂಡಿ ಹಾಗೂ ಮುಧೋಳ ತಾಲ್ಲೂಕಿನಿಂದ ಅಥಣಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸೇವೆ ಕಲ್ಪಿಸುತ್ತಿದ್ದ ಬೋಟ್‍ ಸೇವೆಯನ್ನು ಬಂದು ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು