ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಪ್ರಭೆ ಪ್ರವಾಹ: ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಂಚಾರ ಸ್ಥಗಿತ

Last Updated 26 ಜುಲೈ 2021, 4:52 IST
ಅಕ್ಷರ ಗಾತ್ರ

ಬಾಗಲಕೋಟೆ: ಮಲಪ್ರಭಾ ನದಿಗೆ ನವಿಲುತೀರ್ಥ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಬಾದಾಮಿ ತಾಲ್ಲೂಕಿನ ಗೋವನಕೊಪ್ಪ- ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಕೊಣ್ಣೂರು ನಡುವಿನ ಹೊಸ ಸೇತುವೆ ಜಲಾವೃತವಾಗಿದ್ದು, ಹುಬ್ಬಳ್ಳಿ-ಸೊಲ್ಲಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಸೋಮವಾರ ಬೆಳಿಗ್ಗೆಯಿಂದ ಸಂಚಾರ ಸ್ಥಗಿತಗೊಂಡಿದೆ.

ಕಳೆದ ಮೂರು ವರ್ಷಗಳಿಂದ ಮಲಪ್ರಭೆಗೆ ಜಲಾಶಯದಿಂದ 15 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಟ್ಟಾಗಲೆಲ್ಲಾಹೊಸ ಸೇತುವೆ ಜಲಾವೃತವಾಗಿ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳ್ಳುತ್ತಿದೆ.

ಈ ಹೆದ್ದಾರಿ ಹುಬ್ಬಳ್ಳಿಯಿಂದ ಸೊಲ್ಲಾಪುರ ಮಾರ್ಗವಾಗಿ ಉತ್ತರ ಭಾರತದ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ಸರಕು ಸಾಗಣೆಯ ಪ್ರಮುಖ ಹಾದಿಯಾಗಿದೆ.

ವಾಹನಗಳು ರಾಮದುರ್ಗ, ಧಾರವಾಡ ಮೂಲಕ ಇಲ್ಲವೇ ಬಾದಾಮಿ, ರೋಣ ನವಲಗುಂದ ಮಾರ್ಗವಾಗಿ ಹುಬ್ಬಳ್ಳಿಗೆ ತಲುಪಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT