ಹುನಗುಂದ: ರೈತರು ಬೀಜೋಪಚಾರದಿಂದ ರೋಗಗಳ ನಿಯಂತ್ರಣದ ಜೊತೆಗೆ ಉತ್ತಮ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಸಂಜೀವ್ ಜೋಶಿ ಹೇಳಿದರು.

ಸೋಮವಾರ ನಗರದ ಎಪಿಎಂಸಿ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ನಡೆದ ಬೀಜೋಪಚಾರ ತರಬೇತಿ ಹಾಗೂ ರೈತರಿಗೆ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರು ಬಿತ್ತನೆ ಬೀಜ ಹಾಗೂ ಗೊಬ್ಬರವನ್ನು ಖರೀದಿಸುವಾಗ ಸಂಬಂಧಪಟ್ಟ ಅಂಗಡಿಯವರಿಂದ ಕಡ್ಡಾಯವಾಗಿ ರಸೀದಿ ಪಡೆಯಬೇಕು ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸೋಮಲಿಂಗಪ್ಪ ಅಂಟರಠಾಣಿ ಮಾತನಾಡಿ, ‘ಎಲ್ನಿನೊ ಪರಿಣಾಮ ಹಾಗೂ ಭಾರತೀಯ ಹವಾಮಾನ ವರದಿಯಂತೆ ಈ ಬಾರಿ ಮುಂಗಾರು ಮಳೆ ಆಶಾದಾಯಕವಾಗಿಲ್ಲ. ಹೀಗಾಗಿ ತೊಗರಿ, ಸೂರ್ಯಕಾಂತಿ, ಸಜ್ಜೆ ಹಾಗೂ ನವಣೆಯಂತಹ ಬರ ನಿರೋಧಕ ಬೆಳೆಗಳನ್ನು ಬೆಳೆಯಲು ರೈತರು ಮುಂದಾಗಬೇಕು. ಮಧ್ಯ ಪ್ರಾಚ್ಯದಲ್ಲಿ ಉಂಟಾದ ಬಿಕ್ಕಟ್ಟಿನಿಂದ ಯೂರಿಯಾ ಹಾಗೂ ಡಿಎಪಿ ಗೊಬ್ಬರದ ಕೊರತೆ ಸ್ವಲ್ಪ ಮಟ್ಟಿಗಿದೆ. ಬೇರೆ ಗೊಬ್ಬರ ಹಾಗೂ ಬೀಜದ ಕೊರತೆ ಇಲ್ಲ. ರೈತರು ಸಾವಯವ ಗೊಬ್ಬರ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರು ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಮಿತವಾಗಿ ಬಳಕೆ ಮಾಡಬೇಕು. ಸರ್ಕಾರದ ತಾಂತ್ರಿಕ ನಿರ್ದೇಶನದಂತೆ ತಡವಾಗಿ ಬೀಜ ವಿತರಣೆ ಮಾಡಲಾಗುತ್ತಿದೆ. ಮಳೆ ಕಡಿಮೆ ಆಗಿದ್ದರಿಂದ ಬೀಜದ ಬೇಡಿಕೆ ಕಡಿಮೆಯಾಗಿದೆ’ ಎಂದು ಹೇಳಿದರು. ಕೃಷಿಕ ಸಮಾಜದ ನಿರ್ದೇಶಕರಾದ ಶರಣಗೌಡ ಅರಸಿಬಿಡಿ, ಪ್ರಭು ಇದ್ದಲಗಿ, ಬಸವರಾಜ ಹೊಸಮನಿ, ಕೃಷ್ಣಾ ಜಾಲಿಹಾಳ, ವಿಜಯ ಮಹಾಂತೇಶ ಮಲಗಿಹಾಳ ಕೃಷಿ ಅಧಿಕಾರಿ ಮಹೇಶ ಕಟಗೇರಿ, ಸಂಗಮೇಶ ಸಜ್ಜನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-19-537019516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.