ಹುನಗುಂದ: ತಾಲ್ಲೂಕಿನ ಚಿತ್ತವಾಡಗಿಯ ಹಿರೇಹಳ್ಳದ ದಡದಲ್ಲಿ ಗ್ರಾಮ ಪಂಚಾಯ್ತಿ ಸಿಬ್ಬಂದಿ ವಾಹನದ ಮೂಲಕ ಚರಂಡಿ ತ್ಯಾಜ್ಯ ಹಾಗೂ ಕಸಕಡ್ಡಿ ಸುರಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮ ಪಂಚಾಯಿತಿ ಸಿಬ್ಬಂದಿ ಹಿರೇಹಳ್ಳಕ್ಕೆ ತ್ಯಾಜ್ಯ ಸುರಿಯುವುದರಿಂದ ನೀರು ಮಲಿನಗೊಳ್ಳುತ್ತದೆ. ಜಾನುವಾರು, ಪ್ರಾಣಿ, ಪಕ್ಷಿಗಳು ಹಾಗೂ ಜಲಚರಗಳು ಹಿರೇಹಳ್ಳದ ನೀರನ್ನು ಆಶ್ರಯಿಸಿವೆ. ಆದರೆ ಬೇಸಿಗೆ ಸಂದರ್ಭದಲ್ಲಿ ಹಳ್ಳಕ್ಕೆ ತ್ಯಾಜ್ಯ ಸುರಿಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಜನರು ಪ್ರಶ್ನಿಸುತ್ತಾರೆ.

ಕಳೆದ ಕೆಲವು ತಿಂಗಳುಗಳಿಂದ ಹಳ್ಳದ ದಡದಲ್ಲಿ ತ್ಯಾಜ್ಯ ಸುರಿಯುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಪದೇ ಪದೇ ಹಳ್ಳಕ್ಕೆ ತ್ಯಾಜ್ಯ ಸುರಿಯುವುದರಿಂದ ಹಳ್ಳದ ನೀರಿಗೆ ತ್ಯಾಜ್ಯ ಸೇರಿ ನೀರು ಮಲಿನಗೊಳ್ಳುತ್ತಿದೆ ಜೊತಗೆ ದುರ್ವಾಸನೆ ಬೀರುತ್ತಿದೆ.

ಚಿತ್ತವಾಡಗಿ ಗ್ರಾಮವು ಹಿರೇಬಾದವಾಡಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡುತ್ತದೆ. ಗ್ರಾಮ ಪಂಚಾಯಿತಿ ಪ್ರತ್ಯೇಕ ತ್ಯಾಜ್ಯ ವಿಲೇವಾರಿ ಘಟಕ ಹೊಂದಿದೆ. ಆದರೂ ಹಳ್ಳದಲ್ಲಿ ಪದೇ ಪದೇ ತ್ಯಾಜ್ಯ ಸುರಿಯುತ್ತಿರುವುದು ಏಕೆ? ನೀರು ಮಲಿನಗೊಂಡು ಪ್ರಾಣಿ, ಪಕ್ಷಿಗಳ ಮೇಲೆ ದುಷ್ಪರಿಣಾಮ ಉಂಟಾದರೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸುತ್ತಾರೆ.

ಹಿರೇಹಳ್ಳದ ದಡದಲ್ಲಿ ಗ್ರಾಮದ ಆರಾಧ್ಯ ದೈವ ವೀರಭದ್ರೇಶ್ವರ ದೇವಸ್ಥಾನವಿದೆ. ದೇವಸ್ಥಾನದ ಸುತ್ತಲಿನ ಪರಿಸರವನ್ನು ಸ್ವಚ್ಛಂದವಾಗಿಡುವ ಬದಲಿಗೆ ಜಾಗ ಮಲಿನಗೊಳಿಸುತ್ತಿರುವುದು ಸರಿಯಲ್ಲ ಎನ್ನುತ್ತಾರೆ ಗ್ರಾಮಸ್ಥರು.

ಹಳ್ಳದ ದಡದಲ್ಲಿ ತ್ಯಾಜ್ಯ ಸುರಿಯುತ್ತಿರುವುದರ ಬಗ್ಗೆ ಮಾಹಿತಿ ಪಡೆಯಲು ಹಿರೇಬಾದವಾಡಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿದರೆ ಕರೆ ಸ್ವೀಕರಿಸಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-19-876088344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.