ಹುನಗುಂದ: ವ್ಯಸನಮುಕ್ತ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ನಗರದ ವಿ.ಎಂ.ಎಸ್.ಆರ್.ವಿ ಮಹಾವಿದ್ಯಾಲಯದ ಕ್ರೀಡಾ ನಿರ್ದೇಶಕ ಎಸ್.ಬಿ. ಚಳಗೇರಿ ಎಚ್ಚರಿಸಿದರು.

ಸೋಮವಾರ ನಗರದ ಗೌರಮ್ಮ ಚರಂತಿಮಠ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ನಿಮಿತ್ತ ನಡೆದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜೀವನ ಅಮೂಲ್ಯವಾದದ್ದು. ವ್ಯಸನಿಗಳಾಗಿ ಅದನ್ನು ವ್ಯರ್ಥ ಮಾಡಬಾರದು. ನಿಮ್ಮ ಕನಸು, ಗುರಿ ಈಡೇರಬೇಕಾದರೆ ದುಶ್ಚಟಗಳಿಂದ ದೂರವಿದ್ದು, ಉತ್ತಮ ಹವ್ಯಾಸಗಳಿರಬೇಕು. ಆರೋಗ್ಯಕರ ಜೀವನವೇ ಯಶಸ್ಸಿನ ಮೊದಲ ಮೆಟ್ಟಿಲು’ ಎಂದರು.

‘ನರ್ಸಿಂಗ್ ವಿದ್ಯಾರ್ಥಿಗಳಾಗಿ ಕೇವಲ ತಮ್ಮ ಆರೋಗ್ಯವನ್ನಷ್ಟೇ ಅಲ್ಲ, ಸಮಾಜದ ಆರೋಗ್ಯವನ್ನೂ ಕಾಪಾಡುವ ಜವಾಬ್ದಾರಿ ಹೊಂದಿದ್ದೀರಿ. ನಾಳೆಯ ಆರೋಗ್ಯ ಸೇವೆಗೆ ನಾಯಕರಾಗುವ ನೀವು ಜನರಿಗೆ ಆರೋಗ್ಯ ಶಿಕ್ಷಣ ನೀಡಬೇಕು’ ಎಂದು ಹೇಳಿದರು.

ನಗರದ ವಿ.ಎಂ.ಎಸ್.ಆರ್ ವಸ್ತ್ರದ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್. ಆರ್.ಗೋಲಗೊಂಡ ಮಾತನಾಡಿ, ತಂಬಾಕು ಮತ್ತು ನಿಕೋಟಿನ್ ವ್ಯಸನದ ದುಷ್ಪರಿಣಾಮಗಳ ಕುರಿತು, ತಂಬಾಕು ಸೇವನೆಯಿಂದ ಉಂಟಾಗುವ ಕ್ಯಾನ್ಸರ್ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಶಾಶ್ವಕೋಶದ ಸಮಸ್ಯೆಗಳ ಬಗ್ಗೆ, ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವ ಮಾಹಿತಿಯನ್ನು ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಸಂಗಮೇಶ ಪಟ್ಟಣಶೆಟ್ಟಿ ಮಾತನಾಡಿದರು. ಉಪನ್ಯಾಸಕರಾದ ವಾಸು, ಸುನೀಲ್ ಕೋಳಿ, ಮೀನಾಕ್ಷಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-19-1087554224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.