ಹುನಗುಂದ: ಪಟ್ಟಣದ ಮಧ್ಯದಲ್ಲಿ ಹಾಯ್ದು ಹೋಗಿರುವ ರಾಯಚೂರು- ಬೆಳಗಾವಿ ರಾಜ್ಯ ಹೆದ್ದಾರಿ 2ರಲ್ಲಿ ವಾಹನ ಸಂಚಾರ ಮತ್ತು ಪಾದಚಾರಿಗಳ ಜನದಟ್ಟಣೆ ಹೆಚ್ಚಿದ್ದರಿಂದ ರಸ್ತೆ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಬೀದಿ ಬದಿ ವ್ಯಾಪಾರಸ್ಥರು ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ ಹೇಳಿದರು.

ನಗರದ ಮಹಾಂತ ವೃತ್ತದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ನಿಯಮಾನುಸಾರ ರೇಖೆ ಮೂಲಕ ಸ್ಥಳವನ್ನು ನಿಗದಿಪಡಿಸಿ ಅವರು ಮಾತನಾಡಿದರು.

ಬೀದಿ ಬದಿ ವ್ಯಾಪಾರಸ್ಥರು ಎಲ್ಲೆಂದರಲ್ಲಿ ಅಂಗಡಿ, ತಳ್ಳು ಗಾಡಿಗಳನ್ನು ನಿಲ್ಲಿಸುವುದರಿಂದ ಪಟ್ಟಣದ ಪ್ರವಾಸಿ ಮಂದಿರದಿಂದ ವಿಜಯ ಮಹಾಂತೇಶ ಪ್ರೌಢಶಾಲೆಯವರೆಗೆ ವಾಹನಗಳ ಸಂಚಾರಕ್ಕೆ ತೊಂದರೆ ಜೊತೆಗೆ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಸಂಚಾರ ನಿಯಮದಂತೆ ಪುರಸಭೆ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಜಾಗ ಗುರುತುಪಡಿಸಲಾಗುತ್ತಿದೆ ಎಂದರು.

ಪಿಎಸ್ಐ ಸಿದ್ಧಾರೂಢ ಆಲದಕಟ್ಟಿ ಮಾತನಾಡಿ, ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ವ್ಯಾಪಾರಿಗಳು ತಳ್ಳುಗಾಡಿ ನಿಲ್ಲಿಸುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ವ್ಯಾಪಾರಿಗಳು ನಿಯಮಗಳನ್ನು ಪಾಲಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದರು.

ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಪುರಸಭೆ ಸದಸ್ಯ ಯಲ್ಲಪ್ಪ ನಡುವಿನಮನಿ, ಮುಖಂಡ ಅಮರೇಶ ನಾಗೂರ ಮತ್ತು ಪುರಸಭೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.