ಹುನಗುಂದ: ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ಮೂಲಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನವಾದ ಗುರುವಾರವು ಮುಂದುವರಿಯಿತು.

ಧರಣಿ ಸ್ಥಳಕ್ಕೆ ಪುನರ್ವಸತಿ ಹಾಗೂ ಪುನರ್ ನಿರ್ಮಾಣ (ಆರ್ಆಂಡ್ಆರ್) ಇಲಾಖೆಯ ಸಹಾಯಕ ಎಂಜನಿಯರ್ ಕೆ. ಎನ್ಅ ಒಡೆಯರ್ ಭೇಟಿ ನೀಡಿ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿ, ಗ್ರಾಮದಲ್ಲಿ ಹೊಸ ಶೆಡ್ಗಳ ನಿರ್ಮಾಣಕ್ಕೆ ₹73 ಲಕ್ಷದ ಪ್ರಸ್ತಾವ ಸಲ್ಲಿಸಲಾಗಿದ್ದು, ಇಲಾಖೆಯಲ್ಲಿ ಅನುದಾನವಿಲ್ಲ. ಈ ವಿಷಯವನ್ನು ಸ್ಥಳೀಯ ಶಾಸಕರು ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅನುದಾನ ಮಂಜೂರು ಆದ ತಕ್ಷಣ ಕೆಲಸ ಆರಂಭಿಸಲಾಗುವುದು ಎಂದು ಸಂತ್ರಸ್ತರಿಗೆ ಭರವಸೆ ನೀಡಿದರು. ಆದರೂ ನಮ್ಮ ಬೇಡಿಕೆಗಳು ಈಡೇರಿಸುವ ವರಗೆ ಧರಣಿ ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದರು.

ಹಗಲು ವೇಳೆ ಕೃಷಿ ಸೇರಿದಂತೆ ಕೆಲಸ ಕಾರ್ಯಗಳಿಗೆ ಹೋಗಿದ್ದ ಸಂತ್ರಸ್ತರು ಬುಧವಾರ ರಾತ್ರಿ 7 ರಿಂದ 10 ರ ವರೆಗೆ ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-19-426354496

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.