ಹುನಗುಂದ: ಹುನಗುಂದ ಮತ್ತು ಇಳಕಲ್ ತಾಲ್ಲೂಕುಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಅಕ್ರಮ ಶುಲ್ಕ ವಸೂಲಿ ತಡೆಗಟ್ಟಬೇಕು ಎಂದು ಆಗ್ರಹಿಸಿ ಹುನಗುಂದ ಮತ್ತು ಇಳಕಲ್ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ) ವತಿಯಿಂದ ಸೋಮವಾರ ನಗರದ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಅವರಿಗೆ ಮನವಿ ಸಲ್ಲಿಸಲಾಯಿತು.

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಶರಣಪ್ಪ ಗಾಣಗೇರ ಮಾತನಾಡಿ, ‘ಕರ್ನಾಟಕ ಶಿಕ್ಷಣ ಕಾಯ್ದೆ 1983ರ ನಿಯಮಗಳನ್ನು ಉಲ್ಲಂಘಿಸಿ ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಹೆಚ್ಚಿನ ಖಾಸಗಿ ಶಾಲೆಗಳು ಪೋಷಕರಿಗೆ ಯಾವುದೇ ರಸೀದಿ ನೀಡದೇ ಅಧಿಕೃತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿವೆ. ಪ್ರತಿ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲು ಶಾಲೆಗಳು ಪಡೆಯುವ ಒಟ್ಟು ಶುಲ್ಕದ ವಿವರವನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು. ಲಾಭ ಬೋಧಕ ಉದ್ದೇಶಕ್ಕೆ ತಡೆ, ಸುಪ್ರೀಂ ಕೋರ್ಟ್ ತೀರ್ಪುಗಳು ಹಾಗೂ ಶಿಕ್ಷಣ ಕಾಯ್ದೆಯ ಪ್ರಕಾರ ಶಿಕ್ಷಣ ಸಂಸ್ಥೆಗಳು ಲಾಭದ ಉದ್ದೇಶ ಹೊಂದಿರಬಾರದು. ಆದರೆ ಈ ಎರಡೂ ತಾಲ್ಲೂಕುಗಳ ಕೆಲವು ಸಂಸ್ಥೆಗಳು ಕೇವಲ ವ್ಯಾಪಾರೀಕರಣಕ್ಕೆ ಇಳಿದಿದ್ದು, ಪೋಷಕರ ಆರ್ಥಿಕ ಪರಿಸ್ಥಿತಿಯ ದುರ್ಲಾಭ ಪಡೆಯುತ್ತಿವೆ ಎಂದರು.

ಅಷ್ಟೇ ಅಲ್ಲದೇ ಅನೇಕ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಜೊತೆಗೆ ಸೂಕ್ತ ಆಟದ ಮೈದಾನ, ಪ್ರಯೋಗಾಲಯ, ಗ್ರಂಥಾಲಯಗಳಿಲ್ಲದಿದ್ದರೂ ‘ಅಭಿವೃದ್ಧಿ ಶುಲ್ಕ’ದ ಹೆಸರಿನಲ್ಲಿ ಭಾರಿ ಮೊತ್ತವನ್ನು ವಸೂಲಿ ಮಾಡಲಾಗುತ್ತಿದೆ. ಇದು ಕಾಯ್ದೆಯ ನೇರ ಉಲ್ಲಂಘನೆಯಾಗಿದೆ. ತಕ್ಷಣವೇ ಎರಡೂ ತಾಲ್ಲೂಕುಗಳ ಎಲ್ಲ ಖಾಸಗಿ ಶಾಲೆಗಳಿಗೆ ನೋಟಿಸ್ ನೀಡಿ, ಅವುಗಳ ಲೆಕ್ಕ ಪರಿಶೋಧನಾ ವರದಿ ಮತ್ತು ಶುಲ್ಕದ ಪಟ್ಟಿಯನ್ನು ತರಿಸಿಕೊಳ್ಳಬೇಕು. ನಿಯಮ ಉಲ್ಲಂಘಿಸುವ ಶಾಲೆಗಳ ಮೇಲೆ ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ದಂಡ ವಿಧಿಸಬೇಕು. ಪ್ರತಿ ಶಾಲೆಯ ಹೊರಭಾಗದಲ್ಲಿ ಸರ್ಕಾರದ ನಿಯಮಾನುಸಾರ ನಿಗದಿಪಡಿಸಿದ ಶುಲ್ಕದ ಫಲಕವನ್ನು ಅಳವಡಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದರು.

ಮುಂದಿನ 7 ದಿನಗಳ ಒಳಗೆ ಸೂಕ್ತ ಕ್ರಮ ಜರುಗಿಸದಿದ್ದಲ್ಲಿ, ಸಂಘಟನೆಯ ವತಿಯಿಂದ ಉಭಯ ತಾಲ್ಲೂಕು ಕಚೇರಿಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಯಾಕೂಬ್ ಕಳ್ಳಿಮನಿ, ಗೋವಿಂದ್ ಸಂಗಮ್, ವೆಂಕಟೇಶ್ ವಡ್ಡರ, ಮಂಜು ದಾಸರ, ಮಂಜುನಾಥ ಮಾದರ, ಶಾಂತಪ್ಪ ಮಸ್ಕಿ, ರಾಜು ಈಟಿ, ಮಹೇಶ ಹೊಸೂರ, ದುರಗೇಶ್ ಹರಿಜನ, ಕೆಂಚಪ್ಪ ಮಾದರ, ಮಹಾಂತೇಶ ಪರಮನಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-19-1123506008

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.